ಬ್ರೇಕಿಂಗ್ : ಡಿ.ಜಿ.ಹಳ್ಳಿಯಲ್ಲಿ ಬೆಂಕಿಯಿಟ್ಟ ಪುಂಡರ ವಿರುದ್ಧ ಗೂಂಡಾ ಕಾಯ್ದೆಯಡಿ ಕೇಸ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು : ಕಳೆದ ರಾತ್ರಿ ನಗರದ ಡಿಜಿ ಹಳ್ಳಿ ಹಾಗೂ ಕೆ ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೋಮು ಗಲಭೆಯಲ್ಲಿ ಭಾಗಿಯಾದ  ಆರೋಪಿಗಳ ಮೇಲೆ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲು ರಾಜ್ಯ ಸರ್ಕಾರದ ತೀರ್ಮಾನಿಸಿದೆ.

ಮತ್ತೊಂದೆಡೆ ಗಲಾಟೆ ನೆಪದಲ್ಲಿ ಸಾರ್ವಜನಿಕ ಆಸ್ತಿ, ಪಾಸ್ತಿಗೆ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಮಾಡಲಾಗುವುದು. ಈ ಬಗ್ಗೆ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಂತೆಯೇ ಕರ್ನಾಟಕ ಸರ್ಕಾರ ಕಾರ್ಯಪ್ರವೃತ್ತವಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂದು ಸಂಜೆ ಕಾವಲ್ ಬೈರಸಂದ್ರದಲ್ಲಿರುವ ಶಾಸಕ ಶ್ರೀನಿವಾಸ ಮೂರ್ತಿ ಮನೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ರಾತ್ರಿ ಯಾರೆಲ್ಲಾ ಗಲಭೆಯಲ್ಲಿ ಭಾಗಿಯಾಗಿದ್ದರು ಎಂಬುದರ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ.

ಈಗಾಗಲೇ 145 ಜನರನ್ನು ಬಂಧಿಸಲಾಗಿದೆ. ಇದರಲ್ಲಿ ಅಪರಾಧ ಹಿನ್ನೆಲೆ ಇರುವ ವ್ಯಕ್ತಿಗಳು ಭಾಗಿಯಾಗಿರೋದು ಗೊತ್ತಾಗಿದೆ ಎಂದರು.ಗೃಹ ಸಚಿವ ಬಸವರಾಜ​ ಬೊಮ್ಮಾಯಿಇನ್ನು ಕಾವಲ್ ಬೈರಸಂದ್ರದ ಪರಿಸ್ಥಿತಿ ನೋಡಿದರೆ ತುಂಬಾ ನೋವಾಗುತ್ತೆ.

ಇದು ನಿಯೋಜಿತ ಘಟನೆ ರೀತಿ ತೋರುತ್ತಿದೆ. ಎಸ್​ಡಿಪಿಐನ್ನು ಏಕಾಏಕಿ ರದ್ದು ‌ಮಾಡೋಕೆ ಆಗಲ್ಲ, ಅದಕ್ಕೆ ಎಂದು ಒಂದು ಪ್ರಕ್ರಿಯೆ ಇದೆ. ಆ ಪ್ರಕಾರ ಸಂಘಟನೆಯನ್ನು ನಿಷೇಧ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು. ಘಟನೆಯಲ್ಲಿ ಯಾರೇ ಭಾಗಿಯಾಗಿದ್ರು, ಕಠಿಣ ಕ್ರಮ ಕೈಗೊಳ್ತೀವಿ ಎಂದಿದ್ದಾರೆ.

ಕಳೆದ ರಾತ್ರಿ ನಡೆದ ಹಿಂಸಾಚಾರಕ್ಕೆ ಕಾರಣವಾದ ‘ಅವಹೇಳನಕಾರಿ’ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಆರೋಪದ ಮೇಲೆ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಸೋದರಳಿಯನನ್ನು ಬಂಧಿಸಲಾಗಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 60 ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.

ಅವಹೇಳನಕಾರಿ ಪೋಸ್ಟ್ ಹಂಚಿಕೊಂಡದ್ದಕ್ಕಾಗಿ ಆರೋಪಿ ನವೀನ್‌ನನ್ನು ಬಂಧಿಸಲಾಗಿದೆ ಎಂದು ತಿಳಿಸಿದರು. ಈಗಾಗಲೇ ಡಿಜೆ ಹಳ್ಳಿ ಮತ್ತು ಕೆಜಿಹಳ್ಳಿಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ಫೂಟೇಜ್ ಪರಿಶೀಲಿಸಿ ಗುರುತು ಪತ್ತೆ ಹಚ್ಚುವ ಕೆಲಸದಲ್ಲಿ ತೊಡಗಿದ್ದಾರೆ.

ಅಷ್ಟೇ ಅಲ್ಲ ಸಾರ್ವಜನಿಕ ಆಸ್ತಿ, ಪಾಸ್ತಿ ನಷ್ಟ ಮಾಡಿದ್ದ ಅವರಿಂದ ಹಣ ವಸೂಲಿ ಮಾಡಲಾಗುವುದು ಎಂದು ಹೇಳಿದರು. ಘಟನೆ ಸಂಬಂಧ ಈಗಾಗಲೇ 140 ಜನರನ್ನು ಬಂಧಿಸಿದ್ದು, ಅವರಿಂದಲೇ ನಷ್ಟ ಭರಿಸಲಾಗುವುದು.

ಈ ಪ್ರಕರಣದಲ್ಲಿ ಯಾರ ಒತ್ತಡಕ್ಕೂ ಮಣಿಯದೇ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು. ನಿನ್ನೆ ರಾತ್ರಿ ನಡೆದ ಘಟನೆ ಅಕ್ಷಮ್ಯ ಅಪರಾಧ. ಪೊಲೀಸರು ಅಶ್ರುವಾಯು ಪ್ರಯೋಗ ಹಾಗೂ ಫೈರಿಂಗ್ ಮೂಲಕ ಗಲಾಟೆಯನ್ನು ನಿಯಂತ್ರಿಸಿದ್ದಾರೆ.

ಈ ಗಲಾಟೆಗೆ ರಾಜಕೀಯ ಕಾರಣವೂ ಇದ್ದಿರುವ ಬಗ್ಗೆ ಮಾಹಿತಿ ಬಂದಿದ್ದು, ಈ ದಿಕ್ಕಿನಲ್ಲಿಯೂ ತನಿಖೆ ನಡೆಯುತ್ತಿದೆ ಎಂದರು.

Facebook Comments

Sri Raghav

Admin