ಕೋವಿಡ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಸಚಿವ ಕೆ.ಗೋಪಾಲಯ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ, ಜೂ.9- ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅವರು ಇಂದು ಚನ್ನರಾಯಪಟ್ಟಣ ತಾಲ್ಲೂಕು ಕೋವಿಡ್ ಆಸ್ಪತ್ರೆ ಹಾಗೂ ಕ್ವಾರಂಟೈನ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹೊರ ರಾಜ್ಯದಿಂದ ಬರುವ ಎಲ್ಲರ ತಪಾಸಣೆ ಮಾಡಿ ವರದಿ ಬಂದ ನಂತರವೇ ಸೋಂಕು ಇಲ್ಲದವರನ್ನು ಮನೆಗಳಿಗೆ ಕಳಿಸಿ ಕ್ವಾರಂಟೈನ್ ಕೇಂದ್ರದಲ್ಲಿ ಉತ್ತಮ ಮೂಲಭೂತ ಸೌಕರ್ಯ ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ತಾಲ್ಲೂಕು ಕೋವಿಡ್ ಆಸ್ಪತ್ರೆಯಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಗೆ ಎಲ್ಲಾ ರೀತಿಯ ಅಗತ್ಯ ಸುರಕ್ಷತಾ ಸಾಧನಗಳನ್ನು ಒದಗಿಸಿ.ಇತರ ರೋಗಿಗಳಿ ಮೊದಲಿನಂತೆ ತಪಾಸಣೆ ಮತ್ತು ಚಿಕಿತ್ಸಾ ವ್ಯವಸ್ಥೆ ಮಂದುವರೆಸಿ ಎಂದು ಸಚಿವರು ಹೇಳಿದರು.

ಮುಂದಿನ ಮೂರ್ನಾಲ್ಕು ದಿನಗಳ ನಂತರ ಜಿಲ್ಲಾಯ ತಾಲೂಕುಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಅರಿತು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದ ಅವರು, ಜಿಲ್ಲಾಯ ಎಲ್ಲ ಅಧಿಕಾರಿಗಳು ಸೂಕ್ತವಾಗಿ ಸ್ಪಂದಿಸಿದ್ದಾರೆ.

ಎಲ್ಲರಿಂದ ಸೂಕ್ತ ಮಾಹಿತಿಯನ್ನು ಪಡೆಯಲಾಗಿದೆ ಮುಂದಿನ ದಿನಗಳಲ್ಲಿ ಜಿಲ್ಲಾಯಲ್ಲಿ ಆಗಬೇಕಾದ ಅಭಿವೃದ್ಧಿ ಕಾರ್ಯಗಳ ಹಾಗೂ ಕಾಮಗಾರಿಗಳ ಪ್ರಗತಿ ಬಗ್ಗೆ ನಿರ್ದೇಶನ ನೀಡಲಾಗುವುದು ಎಂದು ತಿಳಿಸಿದರು.

ತಾಲೂಕಿನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಉತ್ತಮ ಗುಣಮಟ್ಟ ಹೊಂದಿದೆ ಜಿಲ್ಲಾಯಲ್ಲಿರುವ ಬಹುತೇಕ ಸೌಲಭ್ಯವನ್ನು ತಾಲೂಕು ಆಸ್ಪತ್ರೆಗಳಲ್ಲೂ ಸಹ ನೀಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ಮತ್ತಷ್ಟು ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು

ಹಾಸನ ಜಿಲ್ಲಾಗೆ ನಿನ್ನೆ ಪ್ರಥಮ ಬಾರಿಗೆ ಭೇಟಿ ನೀಡಿದ ಸಚಿವರು ಚನ್ನರಾಯಪಟ್ಟಣ ಗಡಿಯ ಆಂಜನೇಯ ಸ್ವಾಮಿ ದೇವಸ್ಥಾನ ಸಾಯಿಬಾಬಾ ಮಂದಿರ ಹಾಸನ ನಗರದ ಹಾಸನಾಂಬೆ -ಸಿದ್ದೇಶ್ವರ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು ಹಾಗೂ ಇಂದು ಚನ್ನರಾಯಪಟ್ಟಣ ಸಮೀಪದ ಮಹಾಲಕ್ಷ್ಮಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಿಲ್ಲಾಯ ಅಭಿವೃದ್ಧಿ ಹಾಗೂ ಕೊರೊನಾದಿಂದ ಬೇಗ ಮುಕ್ತವಾಗುವ ನಿಟ್ಟಿನಲ್ಲಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಶಾಸಕರಾದ ಸಿ.ಎನ್.ಬಾಲಕೃಷ್ಣ, ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲಾ ಪಂಚಾಯತ್ ಸಿ.ಇ.ಒ ಪರಮೇಶ್ , ಉಪ ವಿಭಾಗಾಧಿಕಾರಿ ಡಾ ನವೀನ್ ಭಟ, ತಹಶಿಲ್ದಾರ್ ಮಾರುತಿ ಮತ್ತಿತರರು ಹಾಜರಿದ್ದರು.

Facebook Comments