ಶಾಸಕ ಡಿ.ಸಿ.ಗೌರಿಶಂಕರ್‌ಗೆ ಕೊರೋನಾ ಪಾಸಿಟಿವ್

ಈ ಸುದ್ದಿಯನ್ನು ಶೇರ್ ಮಾಡಿ

ತುಮಕೂರು, ಸೆ.16-ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ಅವರಿಗೂ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ. ಬೆಂಗಳೂರಿನಲ್ಲಿ ಅವರ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗೌರಿಶಂಕರ್‍ಅವರ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿ ಕೊಂಡು ಹೋಂ ಕ್ವಾರಂಟೈನ್ ಆಗಲು ಅವರು ಮನವಿ ಮಾಡಿದ್ದಾರೆ.

ಕೊರೋನಾ ಸೋಂಕು ಕಾಣಿಸಿಕೊಂಡ ದಿನದಿಂದ ಜನ ಸಾಮಾನ್ಯರ ಸಂಪರ್ಕದಲ್ಲಿದ್ದು ರೈತರು ಹಾಗೂ ಸಾಮಾನ್ಯ ಜನರಿಗೆ ಅಹಾರ ಪದಾರ್ಥಗಳ ಕಿಟ್‍ಗಳನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದ್ದರು. ಆರೋಗ್ಯ ಇಲಾಖೆ, ಪೋಲಿಸ್ ಇಲಾಖೆ ಸಿಬ್ಬಂದಿ ಸೇರಿದಂತೆ ಹಲವಾರು ಕೊರೊನಾ ವಾರಿಯರ್ಸ್‍ಗಳನ್ನು ಅಬಿನಂದಿಸಿದ್ದರು.

ಈ ನಡುವೆ ಅವರ ಬೆಂಬಲಿಗರು ಇಂದು ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಗೌರಿಶಂಕರ್ ಅವರು ಬೇಗ ಗುಣಮುಖರಾಲಿ ಎಂದು ಹಾರೈಸಿದ್ದಾರೆ. ಇವರು ಶೀಘ್ರ ಗುಣಮುಖವಾಗಲೆಂದು ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಹಲವಾರು ಗಣ್ಯರು ಟ್ವೀಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ರೇವಣ್ಣ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್ ಸಿ ಅಂಜಿನಪ್ಪ,ಬೆಳ್ಳಿ ಲೋಕೇಶ, ನರಸೇಗೌಡ, ಅನಂತï, ಹಿರೇಹಳ್ಳಿ ಮಹೇಶï, ವೆಂಕಟೇಶ, ಸೇರಿದಂತೆ ಹಲವಾರು ಮಂದಿ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ,

Facebook Comments