ಸರ್ಕಾರಿ ನೌಕರರ ಪದೋನ್ನತಿ ಪರಿಷ್ಕರಣೆ ಮಾಡಲು ಸಿಎಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.18-ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಅಥವಾ ಪರಿಷ್ಕರಣೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯಭಾಸ್ಕರ್ ಅವರಿಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಸರ್ಕಾರದ ಹಲವು ಇಲಾಖೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರೂಪಿಸದಿರುವುದರಿಂದ ನೌಕರರು ಪದೋನ್ನತಿಯಿಂದ ವಂಚಿತರಾಗುತ್ತಿದ್ದಾರೆ. ಪ್ರತಿ ಮೂರು ವರ್ಷಗಳಿಗೊಮ್ಮೆ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಹೊರಡಿಸುವಂತೆ 2016ರಲ್ಲೇ ಸುತ್ತೋಲೆ ಹೊರಡಿಸಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಗಮನಸೆಳೆದಿತ್ತು.

ಇಲಾಖೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರೂಪಿಸುವ ಮೂಲಕ ನೌಕರರಿಗೆ ಅನುಕೂಲ ಮಾಡಿಕೊಡುವಂತೆ ನೌಕರರ ಸಂಘ ಸಲ್ಲಿಸಿದ ಮನವಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮೇಲಿನಂತೆ ಆದೇಶಿಸಿದ್ದಾರೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ