ಆರ್ಥಿಕ ಅಭಿವೃದ್ಧಿಗೆ ಶ್ರಮಿಸಲು ಆರ್‌ಬಿಐ-ಹಣಕಾಸು ಇಲಾಖೆಗೆ ಉಪರಾಷ್ಟ್ರಪತಿ ಸಲಹೆ

ಈ ಸುದ್ದಿಯನ್ನು ಶೇರ್ ಮಾಡಿ

rbiನವದೆಹಲಿ, ನ.27 (ಪಿಟಿಐ)- ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ದೇಶದ ಆರ್ಥಿಕ ಅಭಿವೃದ್ಧಿಗಾಗಿ ಸಮಾಲೋಚನೆ ನಡೆಸುವಂತೆ ಭಾರತೀಯ ರಿಜರ್ವ್ ಬ್ಯಾಂಕ್ (ಆರ್‌ಬಿಐ ) ಮತ್ತು ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯಕ್ಕೆ ಉಪರಾಷ್ಟ್ರಪತಿ ಡಾ.ಎಂ.ವೆಂಕಯ್ಯನಾಯ್ಡು ಸಲಹೆ ಮಾಡಿದ್ದಾರೆ. ಆರ್‌ಬಿಐ  ಮತ್ತು ಹಣಕಾಸು ಸಚಿವಾಲಯದ ನಡುವೆ ಇತ್ತೀಚೆಗೆ ಭುಗಿಲೆದ್ದ ವಿವಾದ ಕುರಿತು ಪ್ರಸ್ತಾಪಿಸಿದ ಅವರು ಆತ್ಮಾವಲೋಕನದ ಮೂಲಕ ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಂಡು ಆರ್ಥಿಕ ಅಭಿವೃದ್ಧಿಗೆ ಶ್ರಮಿಸುವ ಸನ್ನಿವೇಶ ಇದಾಗಿದೆ ಎಂದರು. ದೆಹಲಿಯಲ್ಲಿ ಸಿಐಪಿಐ ಕೈಗಾರಿಕಾ ಸಂಘದ ವಜ್ರ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಮುಖ ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ. ಅವುಗಳನ್ನು ದೊಡ್ಡದು ಮಾಡದೆ ಪರಸ್ಪರ ಸೌಹಾರ್ದಯುತ ಚರ್ಚೆ ಮೂಲಕ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ