ಆಸ್ಪತ್ರೆಯಿಂದ ರಾಜ್ಯಪಾಲ ವಿ.ಆರ್.ವಾಲಾ ಡಿಸ್ಚಾರ್ಜ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.30-ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಪಾಲ ವಿ.ಆರ್.ವಾಲಾ ಅವರು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಕಳೆದ 24ರಂದು ಬೆಂಗಳೂರಿನ  ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ವಯೋಸಹಜ ಹಿನ್ನೆಲೆಯಲ್ಲಿ ಅನಾರೋಗ್ಯಕ್ಕೀಡಾಗಿದ್ದ ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ಈಗ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಮುಂದೆ ಯಾವುದೇ ರೀತಿಯ ಒತ್ತಡದ ಕೆಲಸಗಳನ್ನು ನಿರ್ವಹಣೆ ಮಾಡದೇ ವಿಶ್ರಾಂತಿ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಆಸ್ಪತ್ರೆಯ ವೈದ್ಯರು ಸಲಹೆ ಮಾಡಿದ್ದಾರೆ.  ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅವರನ್ನು ಭೇಟಿಯಾಗಿದ್ದ ವಿ.ಆರ್.ವಾಲಾ ರಾಜೀನಾಮೆಯ ಇಂಗಿತ ವ್ಯಕ್ತಪಡಿಸಿದ್ದರು.

Facebook Comments