ಗೌರ್ನರ್ ಆರೋಗ್ಯ ವಿಚಾರಿಸಿದ ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ನ.27- ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವಿ.ಆರ್.ವಾಲಾ ಅವರಿಗೆ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿ ಸಣ್ಣ ಪ್ರಮಾಣದ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ತಮ್ಮ ಅಧಿಕೃತ ಕಾರ್ಯಕ್ರಮಗಳನ್ನು ಬದಿಗೊತ್ತಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.

ಸದ್ಯ ವಾಲಾ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಒಂದೆರಡು ದಿನಗಳಲ್ಲಿ ಮನೆಗೆ ಹಿಂದಿರುಗಲಿದ್ದಾರೆಂದು ತಿಳಿದುಬಂದಿದೆ.  ರಾಜ್ಯಪಾಲರ ಆರೋಗ್ಯ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಯಡಿಯೂರಪ್ಪನವರು ಹಾರೈಸಿದ್ದಾರೆ.

Facebook Comments