ಗುಣಮಟ್ಟದ ಮಾದರಿ ಕಟ್ಟಡ ಕಾಮಗಾರಿ ಕೈಗೊಳ್ಳಲು ಡಿಸಿಎಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಡ್ಯ,ಫೆ.9- ರಾಜ್ಯದಲ್ಲಿ ನಿರ್ಮಿಸುತ್ತಿರುವ ವಸತಿ ನಿಲಯಗಳ ಕಟ್ಟಡ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಪೂರ್ಣ ಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸಂಬಂಧಪಟ್ಟ ಅಧಿಖಾರಿಗಳಿಗೆ ಸೂಚನೆ ನೀಡಿದರು. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಾಳಿಂಗನಹಳ್ಳಿಯಲ್ಲಿ ನಿರ್ಮಿಸುತ್ತಿರುವ ಇಂದಿರಾಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ, ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಮಾದರಿ ಕಟ್ಟಡಗಳನ್ನು ನಿರ್ಮಿಸಬೇಕು.

ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಮಂಜೂರಾತಿ ಪಡೆದ ಅಂದಾಜು ಪಟ್ಟಿಯಂತೆ ಕಾಮಗಾರಿಯನ್ನು ಪೂರ್ಣ ಗೊಳಿಸಬೇಕು. ಯಾವುದೇ ಅಪೂರ್ಣ ಗೊಂಡ ಕಾಮಗಾರಿಗಳನ್ನು ಸ್ವಾಧೀನ ಪಡಿಸಿಕೊಳ್ಳಬಾರದು ಎಂದರು.  ಅಭಿಯಂತರರು ಕಾಮಗಾರಿಗಳನ್ನು ಪರಿಶೀಲಿಸಿ ದೃಡಪಡಿಸಿಕೊಂಡು ಸ್ವಾಧೀನ ಪಡಿಸಿಕೊಳ್ಳಬೇಕು. ಈ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣ ಗೊಳಿಸಿ ವಸತಿ ಶಾಲೆಯು ಸ್ವಂತ ಕಟ್ಟಡದಲ್ಲಿರುವಂತೆ ಕ್ರಮಕೈಗೊಳ್ಳಬೇಕು. ಗುಣಾತ್ಮಕ ಶಿಕ್ಷಣಕ್ಕೆ ಒತ್ತು ನೀಡಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳ ಫಲಿತಾಂಶ ಶೇ.100 ರಷ್ಟು ಬರುವುದಷ್ಟೇ ಅಲ್ಲದೇ ಎಲ್ಲರೂ ಪ್ರಥಮ ಶ್ರೇಣಿಯಲ್ಲೇ ಉತ್ತೀರ್ಣರಾಗುವಂತಾಗಲು ಶಿಕ್ಷಕರು, ಮೇಲ್ವಿಚಾರಕರು ಶ್ರಮಿಸಬೇಕು. ವಿದ್ಯಾರ್ಥಿಗಳ ಸುಪ್ತ ಚೇತನದಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಬೇಕು ಎಂದು ಡಿಸಿಎಂ ಸೂಚಿಸಿದರು.

Facebook Comments