ವಿಧಾನ ಪರಿಷತ್‍ಗೆ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ನಾಮಪತ್ರ ಸಲ್ಲಿಕೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.18- ವಿಧಾನಸಭೆಯಿಂದ ವಿಧಾನ ಪರಿಷತ್‍ನ ಏಳು ಸದಸ್ಯ ಸ್ಥಾನಕ್ಕೆ ಇದೇ 29ರಂದು ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಕೋಲಾರದ ಉದ್ಯಮಿ ಇಂಚರ ಗೋವಿಂದರಾಜು ಅವರು ಇಂದು ನಾಮಪತ್ರ ಸಲ್ಲಿಸಿದರು.

ರಾಜ್ಯಸಭೆ ಚುನಾವಣೆ ಅಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ಗೋವಿಂದರಾಜು ಜೆಡಿಎಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ಬಸವರಾಜ ಹೊರಟ್ಟಿ, ಬಂಡೆಪ್ಪ ಖಾಶೆಂಪುರ್, ವೆಂಕಟರಾವ್ ನಾಡಗೌಡ, ಶ್ರೀನಿವಾಸಗೌಡ, ವಿಧಾನಸಭೆ ಮಾಜಿ ಉಪ ಸಭಾಧ್ಯಕ್ಷ ಕೃಷ್ಣಾರೆಡ್ಡಿ ಮತ್ತಿತರ ಮುಖಂಡರು ಹಾಜರಿದ್ದರು.

ನಾಮ ಪತ್ರ ಸಲ್ಲಿಸುವ ಮುನ್ನ ಗೋವಿಂದರಾಜು ಅವರು,ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಂದ ಪಕ್ಷದ ಬಿಫಾರಂ ಪಡೆದು ಆಶೀರ್ವಾದ ಪಡೆದುಕೊಂಡಿದ್ದರು.

ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪರಿಷತ್ ಅಭ್ಯರ್ಥಿ ಆಯ್ಕೆ ಅಧಿಕಾರವನ್ನು ಗೌಡರಿಗೆ ನೀಡಲಾಗಿತ್ತು. ಪಕ್ಷದ ಶಾಸಕರು ಹಾಗೂ ಮುಖಂಡರೊಂದಿಗೆ ಸಮಾಲೋಚಿಸಿದ ಗೌಡರು ಕೋಲಾರ ಭಾಗದಲ್ಲಿ ಪಕ್ಷದ ಸಂಘಟನೆ ದೃಷ್ಟಿಯಲ್ಲಿಟ್ಟುಕೊಂಡು ಗೋವಿಂದರಾಜು ಅವರಿಗೆ ಟಿಕೆಟ್ ನೀಡಿದ್ದಾರೆ.

ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಸೇರಿದಂತೆ ಹಲವರು ಮೇಲ್ಮನೆ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

 

Facebook Comments