ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಜೆಡಿಎಸ್‌ನ ಗೋವಿಂದರಾಜು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.8-ವಿಧಾನ ಪರಿಷತ್ತಿನ ನೂತನ ಸದಸ್ಯರಾಗಿ ಜೆಡಿಎಸ್‌ನ ಗೋವಿಂದರಾಜು ಪ್ರಮಾಣ ವಚನ ಸ್ವೀಕರಿಸಿದರು. ಮೇಲ್ಮನೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರ ಸಮ್ಮುಖದಲ್ಲಿ ಗೋವಿಂದರಾಜು ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ವಿಧಾನಸಭೆಯಿಂದ ವಿಧಾನ ಪರಿಷತ್ ನ ಏಳು ಸದಸ್ಯ ಸ್ಥಾನಗಳಿಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಗೋವಿಂದರಾಜು ಅವಿರೋಧವಾಗಿ ಆಯ್ಕೆಯಾಗಿದ್ದರು.

ಪ್ರಮಾಣ ವಚನ ಸ್ವೀಕರಿಸಿದ ನಂತರ ಮಾತನಾಡಿದ ಗೋವಿಂದರಾಜು, ನನಗೆ ರಾಜಕೀಯ ರಂಗ ಹೊಸದು. ನನ್ನ ಮೇಲೆ ಪಕ್ಷದ ವರಿಷ್ಠರು ದೊಡ್ಡ ಜವಾಬ್ದಾರಿ ವಹಿಸಿದ್ದಾರೆ.

ಕೋಲಾರ ಭಾಗದಲ್ಲಿ ಪಕ್ಷ ಸಂಘಟನೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ನನ್ನ ಮೇಲೆ ಪಕ್ಷ ಇಟ್ಟಿರುವ ನಂಬಿಕೆ ಹುಸಿಯಾಗದಂತೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಗೋವಿಂದರಾಜು ಕುಟುಂಬ ಸದಸ್ಯರು, ಶಾಸಕ ಶ್ರೀನಿವಾಸ ಗೌಡ, ವಿಧಾನ ಪರಿಷತ್ ಸದಸ್ಯ ಚೌಡರೆಡ್ಡಿ ತೂಪಲ್ಲಿ ಪ್ರಮಾಣ ವಚನ ಸ್ವೀಕಾರ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook Comments

Sri Raghav

Admin