BIG NEWS : ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಮುಂದೂಡಿಕೆ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.3-ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾರಂಭವಾಗಬೇಕಿದ್ದ ಪದವಿ ತರಗತಿಗಳ ಪ್ರವೇಶ ಪ್ರಕ್ರಿಯೆ ಮುಂದೂಡಲಾಗಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆಯನ್ನು ನಾಳೆಯಿಂದ ಪ್ರಾರಂಭಿಸಲು ಕಾಲೇಜು ಶಿಕ್ಷಣ ಇಲಾಖೆ ಈ ಹಿಂದೆ ಸುತ್ತೋಲೆ ಹೊರಡಿಸಿತ್ತು.

ಆದರೆ, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ವರೆಗೆ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡುವಂತೆ ಸೂಚಿಸಿ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಪ್ರಾರಂಭಿಸುವ ದಿನಾಂಕವನ್ನು ಶೀಘ್ರದಲ್ಲೇ ತಿಳಿಸುವುದಾಗಿ ಸುತ್ತೋಲೆಯಲ್ಲಿ ತಿಳಿಸಲಾಗಿದ. ರಾಜ್ಯದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳ ಪ್ರಥಮ ಪದವಿ ತರಗತಿಗಳ ಪ್ರವೇಶವನ್ನು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ವ್ಯವಸ್ಥೆ(ಯುಯುಸಿಎಂಎಸ್) ಮೂಲಕ ನಡೆಸಲು ತೀರ್ಮಾನಿಸಲಾಗಿತ್ತು. ಈ ಸಂಬಂಧ ಕಾಲೇಜು ಶಿಕ್ಷಣ ಇಲಾಖೆಯು ಮಾರ್ಗಸೂಚನೆಯನ್ನು ಹೊರಡಿಸಿತ್ತು.

ಎಲ್ಲ ಸಾರ್ವಜನಿಕ ವಿಶ್ವವಿದ್ಯಾಲಯಗಳ ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಲ್ಲಿ ಉನ್ನತ ಶಿಕ್ಷಣ ಇಲಾಖೆಯು ಇ-ಆಡಳಿತ ಇಲಾಖೆಯ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‍ರವರ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿರುವ ಪ್ರವೇಶಾತಿ ಘಟಕವನ್ನು ಅಭಿವೃದ್ಧಿಪಡಿಸಲಾಗಿತ್ತು. ಪ್ರಸಕ್ತ ಸಾಲಿನ ಪ್ರವೇಶಾತಿ ಪ್ರಕ್ರಿಯೆಯನ್ನು  https://uucms.karnataka.gov.in  ಮೂಲಕ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿತ್ತು.

Facebook Comments