ಗ್ರಾಪಂ ಆಡಳಿತಾಧಿಕಾರಿಗಳಿಗೆ ಮಾರ್ಗಸೂಚಿ ಪ್ರಕಟ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.20-ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ಯನ್ನು ನೇಮಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿಗಳಿಗೆ ಸೂಚಿಸಿರುವ ಸರ್ಕಾರ, ಆಡಳಿತಾಧಿಕಾರಿಗಳ ಅಧಿಕಾರಗಳು ಮತ್ತು ಕರ್ತವ್ಯಗಳ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಗ್ರಾಮ ಪಂಚಾಯ್ತಿಗಳಿಗೆ ಗ್ರೂಪ್-ಎ ಕಿರಿಯ ಶ್ರೇಣಿ ದರ್ಜೆಗಿಂತ ಕಡಿಮೆ ಇಲ್ಲದ ಅಧಿಕಾರಿಯನ್ನು ಆಡಳಿತಾಧಿಕಾರಿಯನ್ನಾಗಿ ನೇಮಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಸೂಚಿಸಿದೆ.

ನೇಮಕಗೊಳ್ಳುವ ಆಡಳಿತಾಧಿಕಾರಿಯು ಗ್ರಾಮ ಪಂಚಾಯಿತಿಯ ಎಲ್ಲಾ ಅಧಿಕಾರಗಳು ಮತ್ತು ಕರ್ತವ್ಯಗಳನ್ನು ಚಲಾಯಿಸಬಹುದು. ಪಂಚಾಯಿತಿಯ ಹಣಕಾಸಿನ ವ್ಯವಹಾರವನ್ನು ಆಡಳಿತಾಧಿಕಾರಿಯು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಂಟಿಯಾಗಿ ನಿರ್ವಹಿಸುವಂತೆ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ವಾರ್ಡ್‍ಸಭೆ, ಗ್ರಾಮ ಸಭೆಗಳನ್ನು ಕಾಲ ಕಾಲಕ್ಕೆ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಪಂಚಾ ಯತಿಯ ಸಾಮಾನ್ಯ ಅಧಿಕಾರಗಳನ್ನು ಚಲಾಯಿಸ ಬಹುದು. ಹಾಗೆಯೇ ಗ್ರಾಮ ಪಂಚಾಯಿತಿ ಅಧ್ಯಕ್ಷನ ಅಧಿಕಾರಗಳನ್ನು ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ. ಪಂಚಾಯಿತಿ ಕಾರ್ಯ ಪಡೆಯ ಕರ್ತವ್ಯಗಳನ್ನು ನಿರ್ವಹಿಸ ಬಹುದು.

ಗಾಮ ಪಂಚಾಯಿತಿಗೆ ಯಾವುದೇ ಹುದ್ದೆಗೆ ನೇಮಕಾತಿ ಹಾಗೂ ನೌಕರರನ್ನು ನೇಮಕ ಮಾಡಿಕೊಳ್ಳುವಂತಿಲ್ಲ. ನೌಕರರಿಗೆ ಮಾಸಿಕ ವಾಗಿ ಕನಿಷ್ಠ ವೇತನ ಪಾವತಿಸಬೇಕು. ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ನಿರ್ವಹಣೆ ಮಾಡುವುದರೊಂದಿಗೆ ಗ್ರಂಥಾಲಯ ಮೇಲ್ವಿಚಾರಕರಿಗೆ ಗೌರವ ಧನವನ್ನು ಮಾಸಿಕವಾಗಿ ಪಾವತಿಸುವಂತೆ ಸೂಚಿಸಲಾಗಿದೆ.

Facebook Comments