ಗ್ರಾ.ಪಂಗಳಲ್ಲಿ ಆಯ್ಕೆಯಾಗಿರುವ ಸದಸ್ಯರನ್ನೇ ಇನ್ನೂ 6 ತಿಂಗಳು ಮುಂದುವರೆಸುವಂತೆ ಡಿಕೆಶಿ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 12- ಗ್ರಾಮ ಪಂಚಾಯತ್‍ಗಳಿಗೆ ಬಿಜೆಪಿ ಕಾರ್ಯಕರ್ತರನ್ನು ನೇಮಿಸುವ ಪ್ರಯತ್ನವನ್ನು ಕೈ ಬಿಟ್ಟು ಈ ಮೊದಲಿನ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರನ್ನೇ ಇನ್ನೂ ಆರು ತಿಂಗಳ ಕಾಲ ಮುಂದುವರೆಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಒತ್ತಾಯಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೇ 24ಕ್ಕೆ ಗ್ರಾಮ ಪಂಚಾಯತ್ ಸದಸ್ಯರ ಅಧಿಕಾರಾವಧಿ ಮುಕ್ತಾಯಗೊಳ್ಳಲಿದೆ. ನೂತನ ಸದಸ್ಯರ ಆಯ್ಕೆಗೆ ಒಂದು ತಿಂಗಳ ಮೊದಲೇ ಚುನಾವಣಾ ಪ್ರಕ್ರಿಯೆಗಳು ಆರಂಭಗೊಳ್ಳಬೇಕಿತ್ತು. ಆದರೆ ಕೊರೊನಾ ಸಂದರ್ಭದಲ್ಲಿ ಚುನಾವಣೆ ಸಾಧ್ಯವಿಲ್ಲ.

ಇದನ್ನೇ ನೆಪ ಮಾಡಿಕೊಂಡು ಬಿಜೆಪಿ ಕಾರ್ಯಕರ್ತರನ್ನು ಗ್ರಾಮ ಪಂಚಾಯತ್ ಗೆ ಸದಸ್ಯರನ್ನಾಗಿ ನೇಮಿಸಲು ತಯಾರಿ ಮಾಡಿದ್ದಾರೆ. ಇದಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಪಟ್ಟಿ ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ಕಾಂಗ್ರೆಸ್ ವಿರೋಧಿಸಲಿದೆ ಎಂದು ಹೇಳಿದರು.

ಗ್ರಾಮ ಪಂಚಾಯತ್ ಸದಸ್ಯರು ಪಕ್ಷದ ಚಿಹ್ನೆ ಮೇಲೆ ಆಯ್ಕೆಯಾಗುವುದಿಲ್ಲ. ಸ್ವತಂತ್ರರಾಗಿ ಆಯ್ಕೆಯಾಗಿರುತ್ತಾರೆ. ವಿಶೇಷ ಸಂದರ್ಭದಲ್ಲಿ ಚುನಾವಣೆ ಹೊರತಾಗಿ ಸದಸ್ಯರನ್ನು ನೇಮಿಸಲು ಜಿಲ್ಲಾಧಿಕಾರಿಯವರಿಗೆ ಅವಕಾಶ ಇದೆ. ಅದನ್ನು ಈಗಾಗಲೇ ಕೈಗೆತ್ತಿಕೊಂಡಿದ್ದಾರೆ. ಒಂದು ವೇಳೆ ರಾಜಕೀಯ ನೇಮಕಾತಿ ಮಾಡಿದೆ ಕಾಂಗ್ರೆಸ್ ಸುಮ್ಮಿನಿರುವುದಿಲ್ಲ ಎಂದು ಎಚ್ಚರಿಸಿದರು.

ಗ್ರಾಮ ಪಂಚಾಯತ್‍ಗಳಿಗೆ ಚುನಾವಣೆ ಮೂಲಕವೇ ಆಯ್ಕೆಯಾಗಬೇಕು. ನೇಮಕಾತಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾದದ್ದು, ಈ ಮೊದಲು ಚುನಾಯಿತರಾದವರನ್ನು ಆರು ತಿಂಗಳ ಕಾಲ ಮುಂದುವರೆಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಧ್ವನಿಗೂಡಿಸಿದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಸತೀಶ್ ಜÁರಕಿಹೊಳಿ, ಮಾಧ್ಯಮ ಘಟಕದ ಅಧ್ಯಕ್ಷ ವಿ.ಎಸ್.ಉಗ್ರಪ್ಪ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Facebook Comments

Sri Raghav

Admin