ಎಚ್.ವಿಶ್ವನಾಥ್ ಅವರ ರಾಜೀನಾಮೆ ಅಂಗೀಕಾರವಾಗಿಲ್ಲ : ಜಿ.ಟಿ.ಡಿ

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಜೂ.16- ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಸಲ್ಲಿಸಿರುವ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ವಿಶ್ವನಾಥ್ ಅವರ ರಾಜೀನಾಮೆ ಅಂಗೀಕಾರವಾಗುವವರೆಗೂ ಅಧ್ಯಕ್ಷ ಸ್ಥಾನಕ್ಕೆ ಬೇರೆ ಹೆಸರುಗಳ ಪ್ರಸ್ತಾವನೆಯ ಮಾತೇ ಇಲ್ಲ ಎಂದು ಹೇಳಿದರು.

ಮೊದಲು ವಿಶ್ವನಾಥ್ ಅವರ ರಾಜೀನಾಮೆ ಅಂಗೀಕಾರವಾಗಬೇಕು.ಆ ನಂತರ ಬದಲಾವಣೆಯ ಮಾತು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.
ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷರಾಗುವವರ ರೇಸ್‍ನಲ್ಲಿ ಇಲ್ಲ ಎಂದು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಜಿಟಿಡಿ ಯಾರೋ ಏನೇನೋ ಮಾತನಾಡುತ್ತಿದ್ದಾರೆ. ಅದೆಲ್ಲಾ ನಿಜವಲ್ಲ ಎಂದು ಸ್ಪಷ್ಟಪಡಿಸಿದರು.

ನಿಖಿಲ್ ಕುಮಾರಸ್ವಾಮಿ ಹೆಸರನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕೆಲವರು ಶಿಫಾರಸು ಮಾಡಿದ್ದಾರೆ. ಈ ಬಗ್ಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

Facebook Comments