ಸಚಿವ ಸ್ಥಾನ ಸಿಗದಿದ್ದರೂ ಪಕ್ಷಕ್ಕಾಗಿ ದುಡಿಯುವೆ : ಜಿ.ಟಿ. ದೇವೇಗೌಡ

ಈ ಸುದ್ದಿಯನ್ನು ಶೇರ್ ಮಾಡಿ

GT-Devegowda--01
ಮೈಸೂರು, ಮೇ 29-ಇನ್ನೆರಡು ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ. ನಗರದ ಖಾಸಗಿ ಹೊಟೇಲ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಸಂಪುಟ ರಚಿಸಲು ಯಾವುದೇ ಅಡೆತಡೆ ಇಲ್ಲ. ಎರಡು ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿರುವುದರಿಂದ ಸಮಯವಾಗುತ್ತದೆ. ಆದರೆ ಮಾಧ್ಯಮಗಳಲ್ಲಿ ಬರುತ್ತಿರುವಂತೆ ಯಾವ ರೀತಿಯ ಗೊಂದಲವಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡುವುದಿಲ್ಲ ಎಂದು ಹೇಳಿಲ್ಲ. ಸಮ್ಮಿಶ್ರ ಸರ್ಕಾರ ಇರುವುದರಿಂದ ಸಂಪುಟ ರಚನೆ ನಂತರ ಈ ಬಗ್ಗೆ ಕ್ರಮ ಕೈಗೊಳ್ಳವುದಾಗಿ ತಿಳಿಸಿದ್ದಾರೆ. ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡದೇ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ನನಗೆ ಯಾರು ಸಚಿವ ಸ್ಥಾನ ತಪ್ಪಿಸಬೇಕೆಂದು ಯತ್ನಿಸುತ್ತಿಲ್ಲ ನನಗೆ ಸಚಿವ ಸ್ಥಾನ ನೀಡಿದರೂ ಸರಿ ನೀಡದಿದ್ದರೂ ಸರಿ ನಾನು ಪಕ್ಷಕ್ಕಾಗಿ ದುಡಿಯುತ್ತೇನೆ ಎಂದರು.

ನಾನಾಗಲಿ, ವಿಶ್ವನಾಥ್ ಆಗಲಿ, ಸಾ.ರಾ.ಮಹೇಶ್ ಆಗಲಿ ಸಚಿವ ಸ್ಥಾನ ನೀಡದಿದ್ದರೂ ಪಕ್ಷಕ್ಕಾಗಿ ದುಡಿಯುತ್ತೆವೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ವಿಶ್ವನಾಥ್, ಸ.ರಾ. ಮಹೇಶ್, ಜೆಡಿಎಸ್ ಮುಖಂಡರಾದ ರಂಗಪ್ಪ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಮುಖ್ಯಸ್ಥರಿದ್ದರು.

Facebook Comments

Sri Raghav

Admin