ಅತಿಥಿ ಉಪನ್ಯಾಸಕರಿಗೆ ಆದಷ್ಟು ಬೇಗ ಸಂಬಳ ನೀಡಿ

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ, ಜೂ.22- ಸರ್ಕಾರಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಆದಷ್ಟು ಬೇಗ ವೇತನ ಪಾವತಿಸು ವಂತೆ ಮೇಲ್ಮನೆ ಸದಸ್ಯರಾದ ಆಯನೂರು ಮಂಜುನಾಥ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೊದಲೇ ಅತಿಥಿ ಉಪನ್ಯಾಸಕರ ಸಂಬಳ ಕಡಿಮೆಯಿದೆ. ಇಂತಹ ಪರಿಸ್ಥಿತಿಯಲ್ಲಿ ಲಾಕ್‍ಡೌನ್ ಅವಧಿಯಲ್ಲಿ ಕಾಲೇಜುಗಳು ಪ್ರಾರಂಭವಾಗದೇ ಅವರಿಗೆ ಸಂಬಳವೂ ಇಲ್ಲದಂತಾಗಿದೆ. ಸರ್ಕಾರ ಲಾಕ್‍ಡೌನ್ ಅವಧಿಯಲ್ಲಿ ಅತಿಥಿ ಉಪನ್ಯಾಸಕರು ಗೆ ಸಂಬಳ ನೀಡದೆ ಇರುವುದರಿಂದ ಇದನ್ನೇ ನಂಬಿದ ಅವರ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೀ ಡಾಗಿವೆ.

ಅಲ್ಲದೇ ಆರ್ಥಿಕ ಸಂಕಷ್ಟದಿಂದಾಗಿ ಮಂಡ್ಯ ಸೇರಿದಂತೆ ಕೆಲವು ಕಡೆ ಕುಟುಂಬಗಳು ಆತ್ಮಹತ್ಯೆಗೆ ಶರಣಾಗಿವೆ. ಉಳಿಸಿಕೊಂಡಿರುವ ವೇತನವನ್ನು ಬಿಡುಗಡೆ ಮಾಡುವುದರೊಂದಿಗೆ ಅವರುಗಳಿಗೆ ಸೇವಾ ಭದ್ರತೆಯನ್ನು ಕಲ್ಪಿಸಿಕೊಡಬೇಕುವುದರ ಜೊತೆಗೆ ಅತಿಥಿ ಉಪನ್ಯಾಸಕರ ರಕ್ಷಣೆಗೆ ಸರ್ಕಾರ ಬರಬೇಕೆಂದು ಮನವಿ ಮಾಡಿದ್ದಾರೆ.

Facebook Comments