ಚುನಾವಣಾ ಆಯೋಗಕ್ಕೆ ಸುಪ್ರೀಂ ನೊಟೀಸ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಜೂ.19- ಗುಜರಾತ್‍ನ ಎರಡು ರಾಜ್ಯಸಭಾ ಸ್ಥಾನಗಳಿಗೆ ಏಕಕಾಲದಲ್ಲಿ ಉಪ ಚುನಾವಣೆ ನಡೆಸಬೇಕೆಂದು ಗುಜರಾತ್ ಕಾಂಗ್ರೆಸ್ ಸಮಿತಿ ಸಲ್ಲಿಸಿದ್ದ ಮನವಿಗೆ ಸುಪ್ರೀಂ ಕೋರ್ಟ್ ಪ್ರತಿಕ್ರಿಯೆ ಕೇಳಿ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.

ಇದೇ 24ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಆಯೋಗಕ್ಕೆ ಸೂಚಿಸಿದೆ. ಜೂ. 25ರಂದು ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ.

ಇದು ಚುನಾವಣಾ ಅರ್ಜಿ ಮೂಲಕ ವಿಚಾರಣೆ ನಡೆಸಬಹುದಾದ ಪ್ರಕರಣವಲ್ಲದಿರುವುದರಿಂದ ತುರ್ತು ವಿಚಾರಣೆ ನಡೆಸುವ ಅವಶ್ಯಕತೆಯಿದೆ ಎಂದು ನ್ಯಾಯಪೀಠ ಹೇಳಿದೆ. ಉಪ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಬಗ್ಗೆ ದೆಹಲಿ ಹೈಕೋರ್ಟ್ ತೀರ್ಪು ನೀಡಿತ್ತು ಎಂದು ಗುಜರಾತ್ ಕಾಂಗ್ರೆಸ್ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ವಿವೇಕ್ ತಂಖ ಹೇಳಿದ್ದರು.

ಗುಜರಾತ್‍ನ ಗಾಂಧಿನಗರ ಕ್ಷೇತ್ರದಿಂದ ಲೋಕಸಭೆಗೆ ಅಮಿತ್ ಶಾ ಅವರು ಮತ್ತು ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಸ್ಮೃತಿ ಇರಾನಿ ಆಯ್ಕೆಯಾದ ನಂತರ ರಾಜ್ಯಸಭೆಯಲ್ಲಿ 2 ಸ್ಥಾನ ಖಾಲಿಯಾಗಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ