ಗುರುನಾನಕ್ 550ನೆ ಜನ್ಮ ಜಯಂತಿ : ಸಿಖ್ ಸಮುದಾಯಕ್ಕೆ ಗಣ್ಯರ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ನ.12- ಸಿಖ್ ಧರ್ಮಸ್ಥಾಪಕ ಗುರುನಾನಕ್ ದೇವ್ ಅವರ 550ನೆ ಜನ್ಮದಿನವಿಂದು. ಈ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯಾತಿಗಣ್ಯರು ಸಿಖ್ ಸಮುದಾಯದವರಿಗೆ ಶುಭ ಕೋರಿದ್ದಾರೆ.

ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು ಮತ್ತು ಡಾ.ಮನಮೋಹನ್‍ಸಿಂಗ್, ಕೇಂದ್ರ ಸಚಿವರಾದ ಅಮಿತ್ ಷಾ, ರಾಜನಾಥ್‍ಸಿಂಗ್, ಹಸ್ಪ್ರೀತ್ ಕೌರ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಸಲ್ಲಿಸಿದ್ದಾರೆ.

ಗುರುನಾನಕ್ ಅವರ ತತ್ತ್ವಾದರ್ಶ ಮತ್ತು ಚಿಂತನೆಗಳು ಎಂದೆಂದಿಗೂ ಪ್ರಸ್ತುತ. ಅದನ್ನು ಎಲ್ಲರೂ ಅನುಸರಿಸಿ ಸಮಾಜದಲ್ಲಿ ಶಾಂತಿ-ಸಾಮರಸ್ಯ ಮತ್ತು ಸಹಬಾಳ್ವೆಗೆ ನೆರವಾಗಬೇಕು ಎಂದು ಗಣ್ಯರು ಕೋರಿದ್ದಾರೆ.

Facebook Comments