ರೈತರ ಬೆಳೆಗೆ ಸೂಕ್ತ ಬೆಲೆ-ಬೆಳೆ‌‌ನಷ್ಟ ಪರಿಹಾರಕ್ಕೆ ಎಚ್.ಕೆ.ಕುಮಾರಸ್ವಾಮಿ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ ; ರಾಜ್ಯ ಸರ್ಕಾರ ಲಾಕ್ಡೌನ್ ನಿಯಮದಲ್ಲಿ ಕೊಂಚ ಸಡಿಲಿಕೆ ಮಾಡಿದ್ದು ಸ್ವಾಗತಾರ್ಹವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಕೆ. ಕುಮಾರಸ್ವಾಮಿ ಹೇಳಿದರು.ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಲಾಕ್ ಡೌನ್ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೆಲವು ಷರತ್ತುಗಳನ್ನು ವಿಧಿಸಿದ್ದರೆ ಇವುಗಳಲ್ಲಿ ಕೆಲವು ಷರತ್ತುಗಳನ್ನು ಸಡಿಲಿಕೆ ಮಾಡಿದ್ದು ಇದರಿಂದ ಕೃಷಿ ಹಾಗೂ ಕೈಗಾರಿಕೋದ್ಯಮಕ್ಕೆ ಸಹಾಯಕವಾಗಲಿದೆ ಎಂದರು .

ಜಿಲ್ಲೆಯಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ಕಾಮಗಾರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದ ಅವರು ಇಲ್ಲಿ ಕಾರ್ಯನಿರ್ವಹಿಸುವ ನೆರೆ ಜಿಲ್ಲೆಯ ಹಾಗೂ ರಾಜ್ಯದ ಕಾರ್ಮಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಕಾಮಗಾರಿಗಳನ್ನು ನಿರ್ವಹಿಸಬಹುದಾಗಿದೆ ಎಂದರು.

ರೈತರು ಉತ್ಪಾದನೆ ಮಾಡಿದ ಬೆಳೆಗಳಿಗೆ ಬೆಂಬಲ ಬೆಲೆ ಸಿಗಬೇಕು ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು ಬೆಳೆ ನಷ್ಟ ಸಂಭವಿಸಿರುವ ರೈತರಿಗೆ ಕೂಡಲೇ ಪರಿಹಾರ ವಿತರಣೆ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ರಾಜ್ಯದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಬೇಕು, ಆಶಾ ಕಾರ್ಯಕರ್ತರಿಗೆ ಗೌರವಧನ ಹೆಚ್ಚಿಸಿ ಸಹಾಯ ಮಾಡಬೇಕು ಎಂದು ಒತ್ತಾಯಿಸಿದ ಅವರು ಸರ್ಕಾರ ಬರಪೀಡಿತ ತಾಲೂಕುಗಳಲ್ಲಿ ನೀರಿನ ಸೌಲಭ್ಯ ಹಣ ಬಿಡುಗಡೆ ಮಾಡಬೇಕು ಕನಿಷ್ಠ ಒಂದು ಲಕ್ಷ ಪ್ರತಿ ಗ್ರಾಮ ಪಂಚಾಯಿತಿಗೆ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು .

ಲಾಕ್‌ ಡೌನ್ ಇನ್ನಷ್ಟು ದಿನ ಮುಂದುವರಿಸುವುದು ಉತ್ತಮವಾಗಿದೆ ಇದಕ್ಕೆ ಹಲವು ರಾಜ್ಯಗಳು ಸಮ್ಮತಿ ಸೂಚಿಸಿವೆ ಎಂದ ಅವರು ಲಾಕ್ ಡೌನ್ ಮುಂದುವರಿಕೆ ನಿರ್ಧಾರ ಉತ್ತಮವಾಗಿದೆ ಎಂದು ಸಲಹೆ ನೀಡಿದರು.

Facebook Comments

Sri Raghav

Admin