ಕೇಂದ್ರದಿಂದ ರಾಜ್ಯದ ಬಗ್ಗೆ ನಿರ್ಲಕ್ಷ್ಯ ಧೋರಣೆ : ಎಚ್‍ಕೆಕೆ ಅಸಮಾಧಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜ.15- ಅನುದಾನ ನೀಡಿಕೆ ಸೇರಿದಂತೆ ರಾಜ್ಯದ ಹಲವು ವಿಚಾರಗಳಲ್ಲಿ ಕೇಂದ್ರ ಸರ್ಕಾರ ದಿವ್ಯ ನಿರ್ಲಕ್ಷ್ಯ ತಾಳಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಟೀಕಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹರಸಾಹಸ ಮಾಡುತ್ತಿದ್ದರೂ ಸಂಪುಟ ವಿಸ್ತರಣೆಗೂ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್, ಜೆಡಿಎಸ್ ತೊರೆದು ಬಿಜೆಪಿ ಸೇರಿರುವ ಶಾಸಕರು ಇತ್ತೀಚಿನ ಬಿಜೆಪಿಯಲ್ಲಿನ ಬೆಳವಣಿಗೆಗಳ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎಂದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಅನುದಾನದಲ್ಲಿ ತಾರತಮ್ಯ ಮಾಡುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನೆರವು ದೊರೆಯುತ್ತಿಲ್ಲ. ಹಿಂದೆಂದೂ ಕಾಣದಂತಹ ಅತಿವೃಷ್ಟಿ ಉಂಟಾಗಿದ್ದರೂ ಕೇಂದ್ರ ಸರ್ಕಾರ ನಿರೀಕ್ಷಿತ ಪ್ರಮಾಣದಲ್ಲಿ ಪರಿಹಾರ ನೀಡಿಲ್ಲ. ರಾಜ್ಯದಿಂದ 25 ಸಂಸದರನ್ನು ಆಯ್ಕೆ ಮಾಡಿಕೊಟ್ಟಿದ್ದರೂ ಉದಾರವಾಗಿ ನೆರವು ನೀಡುವ ಬಗ್ಗೆ ಗಂಭೀರ ಚಿಂತನೆ ಕಾಣುತ್ತಿಲ್ಲ ಎಂದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಹಿಡಿತದಲ್ಲಿ ರಾಜ್ಯ ಸಿಲುಕಿದಂತಾಗಿದೆ. ರಾಜ್ಯದ ವಿಚಾರದಲ್ಲಿ ನಿರ್ಲಕ್ಷ್ಯ ಮನೋಭಾವ ಮುಂದುವರಿಸಲಾಗುತ್ತಿದೆ ಎಂದು ಟೀಕಿಸಿದರು. ಬಿಜೆಪಿ ಮತ್ತು ಕಾಂಗ್ರೆಸ್ ಆಡಳಿತಾವಧಿಯಲ್ಲಿ ರಾಜ್ಯದ ಅಭಿವೃದ್ಧಿಯನ್ನು ನಿರ್ಲಕ್ಷಿಸಿರುವುದು ಕಂಡುಬಂದಿದೆ.

ಮುಂದಿನ ದಿನಗಳಲ್ಲಿ ರಾಜ್ಯದ ಸಮಸ್ಯೆಗಳಿಗೆ ಆದ್ಯತೆ ನೀಡಿ ಜನಪರ ಹೋರಾಟವನ್ನು ಜೆಡಿಎಸ್ ಹಮ್ಮಿಕೊಳ್ಳಲಿದೆ. ಪ್ರಾದೇಶಿಕ ಪಕ್ಷವಾಗಿ ರಾಜ್ಯದ ಜನರ ಪರವಾಗಿ ಹೋರಾಟ ನಡೆಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.

Facebook Comments

Sri Raghav

Admin