ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರಿಗೆ ಪತ್ನಿವಿಯೋಗ, ಕಿಮ್ಸ್ ಗೆ ದೇಹ ದಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.17- ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ಪತ್ನಿ ಲಲಿತಾಂಬ (90) ಇಂದು ಬೆಳಗ್ಗೆ ನಿಧನರಾದರು.ದೊರೆಸ್ವಾಮಿ ಅವರ ಬಾಳ ಸಂಗಾತಿಯಾಗಿ ಅವರ ಪ್ರಾಮಾಣಿಕ ಸರಳ ಬದುಕಿಗೆ ಸಾಂಗತ್ಯ ನೀಡಿ 90 ವರ್ಷಗಳ ಕಾಲ ತುಂಬುಜೀವನ ನಡೆಸಿದ ಲಲಿತಾಂಬ ಅವರು ಪತಿ ದೊರೆಸ್ವಾಮಿ ಹಾಗೂ ಪುತ್ರ-ಪುತ್ರಿಯನ್ನು ಅಗಲಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಜಯನಗರ 6ನೆ ಬ್ಲಾಕ್‍ನಲ್ಲಿರುವ ಅವರ ನಿವಾಸದಲ್ಲಿ ಮಧ್ಯಾಹ್ನದವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಂತರ ಅವರ ದೇಹವನ್ನು ಕೆಂಪೇಗೌಡ ಆಸ್ಪತ್ರೆಗೆ ದಾನ ಮಾಡಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

Facebook Comments