ಮೈತ್ರಿ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ-ಎಚ್‍ಡಿಕೆ ಕಾರಣ : ಎಚ್.ವಿಶ್ವನಾಥ್

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ, ಅ.25- ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಕ್ಕೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರಿಬ್ಬರೂ ಕಾರಣ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಸಮಬಲರಾಗಿದ್ದಾರೆ. ಕಾಂಗ್ರೆಸ್ ಶಾಸಕರ ಸಮಸ್ಯೆಯನ್ನು ಸಿದ್ದರಾಮಯ್ಯ ಅವರು ಕೇಳಲಿಲ್ಲ. ಜೆಡಿಎಸ್ ಶಾಸಕರ ಸಮಸ್ಯೆಯನ್ನು ಕುಮಾರಸ್ವಾಮಿಯವರೂ ಕೇಳಲಿಲ್ಲ. ಇವರಿಬ್ಬರೂ ತಮ್ಮ ತಮ್ಮ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ.

ಯಾರನ್ನೂ ಹೇಳದೆ ಕೇಳದೆ ಸರ್ಕಾರ ಮಾಡಿದರು. ಪಕ್ಷ ರಾಜಕಾರಣ ಇಲ್ಲದೆ ಇರುವುದರಿಂದ ಪಕ್ಷಾಂತರಕ್ಕೆ ಕಾರಣವಾಗುತ್ತದೆ ಎಂದು ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ನಡುವಿನ ಟ್ವೀಟ್ ಸಮರಕ್ಕೆ ವಿಶ್ವನಾಥ್ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.

Facebook Comments