ಜೆಡಿಎಸ್‍ಗೆ ಭವಿಷ್ಯವಿಲ್ಲ, ಹಲವು ಶಾಸಕರು ಪಕ್ಷ ತೊರೆಯುವುದು ಸತ್ಯ : ಎಚ್.ವಿಶ್ವನಾಥ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು – ಜೆಡಿಎಸ್ ಪಕ್ಷಕ್ಕೆ ಭವಿಷ್ಯವಿಲ್ಲ. ಹೀಗಾಗಿ ಹಲವು ಶಾಸಕರು ಬೇರೆ ಪಕ್ಷಕ್ಕೆ ಹೋಗುವುದು ಸತ್ಯ ಎಂದು ಬಿಜೆಪಿ ಮುಖಂಡರಾದ ಎಚ್.ವಿಶ್ವನಾಥ್  ಹೇಳಿದರು.

ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವಿರೋಧಿ ಸರ್ಕಾರದಲ್ಲಿ ಪ್ರಜಾಪ್ರಭುತ್ವ ಸಿಲುಕಿ ನರಳುತ್ತಿರುವುದನ್ನು ಬಿಡುಗಡೆಗೊಳಿಸಲು ನಾವು 17 ಶಾಸಕರು ರಾಜೀನಾಮೆ ಕೊಟ್ಟಿದ್ದೇವೆಯೇ ಹೊರತು ಯಾವುದೇ ಅಧಿಕಾರದ ಆಸೆಯಿಂದಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸಚಿವ ಸ್ಥಾನ ನೀಡುವುದು ಬಿಜೆಪಿ ಹೈಕಮಾಂಡ್‍ಗೆ ಬಿಟ್ಟ ವಿಷಯ. ರಾಜ್ಯದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡಿರುವ ಏಕೈಕ ನಾಯಕ ಯಡಿಯೂರಪ್ಪ. ಅವರ ಮೇಲೆ ನಮಗೆ ನಂಬಿಕೆ ಇದೆ ಎಂದರು. ಕುಮಾರಸ್ವಾಮಿ ಅವರ ಮಾತನ್ನು ನಾನು ಯಾವುದೇ ಕಾರಣಕ್ಕೂ ನಂಬುವುದಿಲ್ಲ. ಬಿಜೆಪಿಯ 30 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ವಿಚಾರ ಸತ್ಯಕ್ಕೆ ದೂರವಾದುದು ಎಂದರು.

ಅವರ ಜತೆ ಯಾವ ಬಿಜೆಪಿ ಶಾಸಕರು ಸಂಪರ್ಕದಲ್ಲಿದ್ದಾರೋ ಗೊತ್ತಿಲ್ಲ. ಜೆಡಿಎಸ್ ಕಟ್ಟುವಲ್ಲಿ ಕುಮಾರಸ್ವಾಮಿ ಅವರ ಯಾವುದೇ ಪಾತ್ರವಿಲ್ಲ. ದೇವೇಗೌಡರೇ ಏಕಾಂಗಿಯಾಗಿ ಪಕ್ಷ ಕಟ್ಟಿದ್ದಾರೆ. ಜೆಡಿಎಸ್‍ನಲ್ಲಿ ಯಾವುದೇ ಭವಿಷ್ಯ ವಿಲ್ಲ. ಹೀಗಾಗಿ ಹಲವು ಶಾಸಕರು ಬೇರೆ ಪಕ್ಷಕ್ಕೆ ಹೋಗಿದ್ದಾರೆ ಎಂದು ತಿಳಿಸಿದರು.

Facebook Comments