“ನಾಮನಿರ್ದೇಶನದ ಮೂಲಕ ಪರಿಷತ್ಗೆ ನನ್ನನ್ನು ಆಯ್ಕೆ ಮಾಡುವ ವಿಶ್ವಾಸವಿದೆ”
ಮೈಸೂರು,ಜೂ.20- ನಾಮನಿರ್ದೇಶನದ ಮೂಲಕ ಪರಿಷತ್ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದರು. ನಗರದಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಸಾಹಿತ್ಯ ಲೋಕದಿಂದ ಆಯ್ಕೆ ಮಾಡುವಂತೆ ಮನವಿ ಮಾಡಿದ್ದೇನೆ.
ಇದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ. ಸಾಹಿತ್ಯ ಕ್ಷೇತ್ರದಿಂದ ನನ್ನನ್ನು ನಾಮನಿರ್ದೇಶನ ಮಾಡಲು ವಿಶ್ವಾಸವಿದೆ ಎಂದರು. ಪರಿಷತ್ ಟಿಕೆಟ್ ನನಗೆ ಕೈ ತಪ್ಪಿದ್ದಕ್ಕೆ ಬೇಸರವಿಲ್ಲ.
ತಳಮಟ್ಟದ ಕಾರ್ಯಕರ್ತರಿಗೆ ಟಿಕೆಟ್ ನೀಡಿರುವುದು ಸ್ವಾಗತಾರ್ಹ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಗೆ ವಿಶ್ವನಾಥ್ ಪ್ರತಿಕ್ರಿಯಿಸಿ, ನನಗೆ ಟಿಕೆಟ್ ಕೈ ತಪ್ಪಿದಾಗ ಸಿದ್ದರಾಮಯ್ಯ ನೆನಪಾಗುವುದಿಲ್ಲ.
ಅವರು ಸಿಎಂ ಆಗದಕ್ಕೆ ನನ್ನನ್ನು ನೆನಪಿಸಿಕೊಳ್ಳಲಿ. ಸಿದ್ದರಾಮಯ್ಯನವರನ್ನು ಕಾಂಗ್ರೆಸ್ಗೆ ಕರೆತಂದಿದ್ದು ನಾನು. ಇದನ್ನು ಅವರು ಎಲ್ಲಿಯೂ ಹೇಳಲ್ಲ. ಅವರಿಗೆ ಕೃತಜ್ಞತಾಭಾವ ಇಲ್ಲ ಎಂದು ಟೀಕಿಸಿದರು.