ಶಕ್ತಿ ಪ್ರದರ್ಶನಕ್ಕೆ ಮುಂದಾದ ಹೆಚ್.ವಿಶ್ವನಾಥ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಸೆ.20- ಬಿಜೆಪಿ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯರಾದ ಅಡಗೂರು ಹೆಚ್ ವಿಶ್ವನಾಥ ಅವರ ಇತ್ತೀಚಿನ ದೆಹಲಿ ಭೇಟಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟ ವಿಸ್ತರಣೆ ಹೇಳಿಕೆ ಹಿನ್ನೆಲೆಯಲ್ಲಿ ಕುರುಬ ಸಮಾಜದ ರಾಜ್ಯ ಮಟ್ಟದ ಸಮಾವೇಶವನ್ನು ಅಕ್ಟೋಬರ್ ಮೊದಲ ವಾರದಲ್ಲಿ ಮಾಡುವ ಮೂಲಕ ತಮ್ಮ ಶಕ್ತಿ ಪ್ರದರ್ಶನಕ್ಕೆ ವಿಶ್ವನಾಥ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಈ ಸಮಾವೇಶದ ರೂಪುರೇಷೆ ಹೇಗಿರಬೇಕು ಎಂದು ಚರ್ಚಿಸಲು ಇಂದು ಸಂಜೆ 5 ಗಂಟೆಗೆ ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ಕುರುಬ ಸಮಾಜದ ಮುಖಂಡರ ಸಭೆ ಕರೆಯಲಾಗಿದೆ. ರಾಜ್ಯದಲ್ಲಿ ಈ ಹಿಂದೆ ಇದ್ದ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯ ಎದ್ದಿದ ಶಾಸಕರ ನಾಯಕತ್ವ ವಹಿಸಿಕೊಂಡು ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರವನ್ನು ವಿಶ್ವನಾಥ ವಹಿಸಿದ್ದರು.

ಮುಖ್ಯಮಂತ್ರಿ ಯಾಗುವ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಮಂತ್ರಿ ಮಾಡುವ ಭರವಸೆಯನ್ನು ವಿಶ್ವನಾಥ ಅವರಿಗೆ ನೀಡಿದ್ದರು. ಅದರೆ ಯಡಿಯೂರಪ್ಪ ಅವರು ಕೊಟ್ಟ ಮಾತನ್ನು ಇಲ್ಲಿಯವರೆಗೆ ಈಡೇರಿಸಲ್ಲಿಲ್ಲ ಎನ್ನುವದು ವಿಶ್ವನಾಥ ಅವರ ಅಸಂಖ್ಯಾತ ಅಭಿಮಾನಿಗಳ ಅಸಮಾಧಾನ. ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಇಂದಿನ ಸಭೆಗೆ ಕಾರಣವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Facebook Comments