ರಾಜೀನಾಮೆ ವಾಪಸ್ ಪಡೆಯುವ ಪ್ರಮೇಯವಿಲ್ಲ : ಎಚ್.ವಿಶ್ವನಾಥ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.19- ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ವಾಪಸ್ ಪಡೆಯುವ ಪ್ರಮೇಯವೇ ಇಲ್ಲ ಎಂದು ಶಾಸಕ ಎಚ್.ವಿಶ್ವನಾಥ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಈಗಾಗಲೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಾಗಿದೆ. ಅದನ್ನು ಅಂಗೀಕಾರ ಮಾಡುವಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದೇನೆ.

ನಿನ್ನೆ ದೇವೇಗೌಡರು ತಮ್ಮೊಂದಿಗೆ ಬಹಳ ಹೊತ್ತು ಮಾತನಾಡಿದರು.ಆ ಸಂದರ್ಭ ದಲ್ಲಿ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದೇನೆ ಎಂದರು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಶೀಕ್ಷಣ ಇಲಾಖೆಗೆ ಸಚಿವರಿಲ್ಲದ ಬಗ್ಗೆ ತಾವು ಮಾತನಾಡಿರುವುದು ನಿಜ.

ಅದು ಪ್ರಮುಖ ಇಲಾಖೆಯಾಗಿದೆ. ಅಂತಹ ಶಿಕ್ಷಣ ಇಲಾಖೆ ಕಳೆದ ಏಳು ತಿಂಗಳಿನಿಂದ ಖಾಲಿ ಇದೆ. ನಾಯಕ ಇಲ್ಲ ಎಂದರೆ ಒಂದು ರೀತಿಯ ಅರಾಜಕತೆ ಆಗುತ್ತದೆ. ಹೀಗಾಗಿ ಶಿಕ್ಷಣ ಇಲಾಖೆಗೆ ಸಚಿವರೊಬ್ಬರಿರಬೇಕು ಎಂಬುದು ತಮ್ಮ ಅಭಿಪ್ರಾಯ ಎಂದು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ