ಎ.ಮಂಜು-ಎಚ್.ವಿಶ್ವನಾಥ್ ಭೇಟಿ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.15- ಮಾಜಿ ಸಚಿವ ಎ.ಮಂಜು ಅವರು ಇಂದು ಮಾಜಿ ಶಾಸಕ ಎಚ್.ವಿಶ್ವನಾಥ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ವಿಶ್ವನಾಥ್ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವಿಬ್ಬರು ಹಿಂದೆ ಕಾಂಗ್ರೆಸ್‍ನಲ್ಲಿ ಒಟ್ಟಿಗೆ ಇದ್ದವು.

ನಾನು ಈಗ ಬಿಜೆಪಿಯಲ್ಲಿದ್ದೇನೆ. ವಿಶ್ವನಾಥ್ ಸಹ ಬಿಜೆಪಿಗೆ ಬಂದಿದ್ದಾರೆ. ಇಂದು ಆಕಸ್ಮಿಕವಾಗಿ ಭೇಟಿ ಮಾಡಿದ್ದೇವೆ ಎಂದರು. ಹುಣಸೂರು ಬೈ ಎಲೆಕ್ಷನ್‍ಗೆ ಪಕ್ಷ ಸಿದ್ಧವಾಗುತ್ತಿದೆ ಎಂದು ಮತ್ತೊಂದು ಪ್ರಶ್ನೆಗೆ ಅವರು ಉತ್ತರಿಸಿದರು.

ಇಂದು ನಾಯಕರಿಬ್ಬರ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

Facebook Comments

Sri Raghav

Admin