‘ಸಮನ್ವಯ ಸಮಿತಿ ಅಧ್ಯಕ್ಷ ಸ್ಥಾನದಲ್ಲಿ ಸಿದ್ದರಾಮಯ್ಯ ವಿಫಲ, ಸಚಿವನಾಗಲು ನಾನು ರೆಡಿ’

ಈ ಸುದ್ದಿಯನ್ನು ಶೇರ್ ಮಾಡಿ

ಕೋಲಾರ, ಮೇ 22- ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಅವರು ಸರಿಯಾಗಿ ಕಾರ್ಯಸೂಚಿಗಳನ್ನು ದಾಖಲಿಸುವಲ್ಲಿ ವಿಫಲರಾಗಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಇಂದಿಲ್ಲಿ ಗುಡುಗಿದ್ದಾರೆ.

ಕೋಲಾರ ಸಮೀಪದ ಘಟ್ಟಹಳ್ಳಿ ಆಂಜನಪ್ಪ ಆಶ್ರಮಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರ ಕಿರುಕುಳ ತಡೆದುಕೊಳ್ಳುವ ಶಕ್ತಿ ಸಿಎಂ ಅವರಿಗಿದೆ. ರಾಜ್ಯದ ಮೈತ್ರಿ ಸರ್ಕಾರ ಚಿರಾಯು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರೋಷನ್‍ಬೇಗ್ ಅವರು ಪಕ್ಷ ಬದಲಿಸಲು ಸ್ವತಂತ್ರರಿದ್ದಾರೆ. ಅವರ ಹೇಳಿಕೆ ವೈಯಕ್ತಿಕವಾದುದು. ಮೇ 23ರ ಬಳಿಕ ರಾಜಕೀಯದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಸುದ್ದಿಗಾರರ ಮತ್ತೊಂದು ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

ನಾನು ಈಗಾಗಲೇ ಸಚಿವನಾಗಿ ಕೆಲಸ ಮಾಡಿದ್ದೇನೆ. ನನಗೆ ಮತ್ತೆ ಅವಕಾಶ ದೊರೆತರೆ ನಿಭಾಯಿಸುತ್ತೇನೆ ಎಂದು ಹೇಳುವ ಮೂಲಕ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂಬ ತಮ್ಮ ಮನದಾಳದ ಮಾತನ್ನು ಹೊರಹಾಕಿದ್ದಾರೆ. ತಾಲೂಕು ಅಧ್ಯಕ್ಷ ಬಾಬು ಮೌನಿ, ಮುಖಂಡರಾದ ಬಣಕನಹಳ್ಳಿ ನಟರಾಜ್, ಶ್ರೀಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin