BSY ಬದಲು ಬೇರೊಬ್ಬರಿಗೆ ನಾಯಕತ್ವ ನೀಡಲಿ : H.ವಿಶ್ವನಾಥ್ ಬಾಂಬ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.17- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಗೆ ಮೊದಲಿದ್ದ ಉತ್ಸಾಹ, ಶಕ್ತಿ, ಆರೋಗ್ಯ ಸರಿಯಿಲ್ಲದ ಕಾರಣ ವರಿಷ್ಠರು ಅವರ ನಾಯಕತ್ವವನ್ನು ಬದಲಾಯಿಸಿ ಬೇರೊಬ್ಬರಿಗೆ ನೀಡಲಿ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬಾಂಬ್ ಸಿಡಿಸಿದ್ದಾರೆ.

ಪಕ್ಷದ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪ ಅವರಿಗೆ ಪಕ್ಷವನ್ನು ಸಂಘಟಿಸಿ ಅಕಾರಕ್ಕೆ ತರಬೇಕೆಂಬ ಉತ್ಸಾಹ, ಶಕ್ತಿ ಇತ್ತು. ಈಗ ಅವರಿಗೆ ವಯಸ್ಸಾಗಿದೆ. ಹೀಗಾಗಿ ಮುಖ್ಯಮಂತ್ರಿ ಸ್ಥಾನದಿಂದ ಬದಲಾಯಿಸಿ ಬೇರೊಬ್ಬರಿಗೆ ನೀಡಲಿ ಎಂದು ಆಗ್ರಹಿಸಿದರು.

ಸಾಮಾನ್ಯ ಜ್ಞಾನ ಇರುವವರು ರಾಜ್ಯದ ಮುಖ್ಯಮಂತ್ರಿಯಾಗಲಿ. ರಾಜ್ಯದ ಹಿತದೃಷ್ಟಿಯಿಂದ ಯಡಿಯೂರಪ್ಪ ಕುರ್ಚಿ ಬಿಟ್ಟರೆ ಒಳ್ಳೆಯರು. ಆಡಳಿತ ನಡೆಸಲು ಸಾಧ್ಯವಿಲ್ಲದಿದ್ದಾಗ ಮುಂದುವರೆಯುವುದು ಸರಿಯಲ್ಲ ಎಂದು ಹೇಳಿದರು.

ಪಕ್ಷದ ಹೈಕಮಾಂಡ್ ಸೂಚಿಸಿದರೆ ನಾನು ರಾಜೀನಾಮೆ ನೀಡಲು ಸಿದ್ದ ಎಂದು ಸ್ವತಃ ಯಡಿಯೂರಪ್ಪನವರೇ ಹೇಳಿದ್ದಾರೆ. ಹೀಗಾಗಿ ಅವರು ಸಿಎಂ ಸ್ಥಾನಕ್ಕೆ ಗೌರವಯುತವಾಗಿ ರಾಜೀನಾಮೆ ನೀಡಬೇಕು. ಅವರನ್ನು ಮಾರ್ಗದರ್ಶಕ ಮಂಡಳಿಗೆ ಸೇರಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಬೇಕೆಂಬುದು ಕೆಲವರ ಒತ್ತಾಸೆಯಾಗಿದೆ. ಕೆಲವರು ನೇರವಾಗಿ ಹೇಳದಿದ್ದರೂ ಪರೋಕ್ಷವಾಗಿ ಈ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಬಿಎಸ್‍ವೈ ಅಕಾರದಿಂದ ಕೆಳಗಿಳಿದರೆ ವೀರಶೈವ ಲಿಂಗಾಯಿತ ಪಂಚಮಸಾಲಿ ಸಮುದಾಯದವರೇ ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದಾರೆ.

ನಾನು ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಅಸಮಾಧಾನದಿಂದ ಈ ಮಾತನ್ನು ಹೇಳುತ್ತಿಲ್ಲ. ಯಡಿಯೂರಪ್ಪನವರಿಗೆ ವಯಸ್ಸಾಗಿರುವುದರಿಂದ ಆಡಳಿತ ನಡೆಸಲು ಸಾಧ್ಯವಿಲ್ಲ. ಎಲ್ಲವನ್ನೂ ಸರಿದೂಗಿಸುವ ವ್ಯಕ್ತಿ ಮುಖ್ಯಮಂತ್ರಿಯಾಗಲಿ ಅದರಲ್ಲೂ ಪಂಚಮಸಾಲಿ ಸಮುದಾಯದವರು ಸಿಎಂ ಆಗಲಿ ಎಂದರು.

ಬಿಜೆಪಿಯಲ್ಲೂ ರಾಕ್ಷಸ ರಾಜಕಾರಣ ನಡೆಯುತ್ತದೆ. ಜೆಡಿಎಸ್‍ನಲ್ಲಿ ಏನು ನಡೆಯುತ್ತಿತ್ತೋ ಇಲ್ಲೂ ಕೂಡ ಕುಟುಂಬ ರಾಜಕಾರಣವೇ ಮೇಳೈಸುತ್ತಿದೆ. ಶಕ್ತಿ ಕೇಂದ್ರದಲ್ಲಿ ಕುಳಿತವರು ಮಬ್ಬಾಗಿದ್ದಾರೆ. ಎಲ್ಲೋ ಕುಳಿತವರು ಎಲ್ಲಾ ಇಲಾಖೆಗಳಲ್ಲೂ ಹಸ್ತಕ್ಷೇಪ ನಡೆಸುತ್ತಿದ್ದಾರೆ. ಇಡೀ ಸರ್ಕಾರವೇ ಅವರ ಕೈಯಲ್ಲಿದೆ ಎಂದು ಆರೋಪಿಸಿದರು.

ಕೇಂದ್ರ ವರಿಷ್ಠರು ಕರ್ನಾಟಕ ಬಿಜೆಪಿ ಘಟಕ, ಇಲ್ಲಿನ ಮುಖ್ಯಮಂತ್ರಿ ಹಾಗೂ ಪಕ್ಷವನ್ನು ಸಹ ಮರೆತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಗಳು ಕೂಡ ಜಾರಿಯಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಶಕ್ತಿ ಕೇಂದ್ರದ ಪ್ರಭಾವ ಕಡಿಮೆಯಾಗತ್ತದೆ. ಬದಲಿಗೆ ಮಠಾೀಶರ ಪ್ರಭಾವ ಹೆಚ್ಚಾಗುತ್ತಿದೆ. ಜನರಿಂದ ಆಯ್ಕೆಯಾದ ಸರ್ಕಾರವನ್ನು ಎಲ್ಲೋ ಕುಳಿತವರು ಆಡಳಿತವನ್ನು ಹಿಡಿತದಲ್ಲಿಟ್ಟುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಪರೋಕ್ಷವಾಗಿ ಮಠಾೀಶರ ವಿರುದ್ಧ ಹರಿಹಾಯ್ದರು.
ಸರ್ಕಾರದಲ್ಲಿ ಕುಟುಂಬದವರ ಹಸ್ತಕ್ಷೇಪ ಹಾಗೂ ಭ್ರಷ್ಟಾಚಾರ ಮಿತಿಮೀರಿದೆ. ಸರ್ಕಾರದ ಬಗ್ಗೆ ಜನ ಕೇವಲವಾಗಿ ಮಾತನಾಡುತ್ತಿದ್ದಾರೆ.

ಯಡಿಯೂರಪ್ಪನವರ ಬಗ್ಗೆ ಎಲ್ಲರೂ ಗೌರವಿಂದ ಮಾತನಾಡುತ್ತಾರೆ. ಆದರೆ ಅವರಿಗೆ ಸರ್ಕಾರ ಮುನ್ನೆಡೆಸುವ ಶಕ್ತಿ ಕುಂದಿದೆ ಎಂದು ಹೇಳಿದರು.
ಕೇವಲ ಲಿಂಗಾಯಿತರಿಗೆ ಮಾತ್ರ ಮುಖ್ಯಮಂತ್ರಿ ಸ್ಥಾನ ಕೊಡಿ ಎಂದು ಹೇಳುವುದು ಸರಿಯಲ್ಲ. ಈಗಾಗಲೇ ಆ ಸಮುದಾಯದ 8 ಮಂದಿ ಸಿಎಂ ಆಗಿದ್ದಾರೆ. ಪಂಚಮಸಾಲಿ ಅವರಿಗೂ ಅವಕಾಶ ಕೊಡಲಿ ಎಂದು ಮನವಿ ಮಾಡಿದರು.

Facebook Comments

Sri Raghav

Admin