ಕುಖ್ಯಾತ ಉಗ್ರ ಹಫೀಜ್ ಶೀಘ್ರ ಬಿಡುಗಡೆ ಸಾಧ್ಯತೆ!?

ಈ ಸುದ್ದಿಯನ್ನು ಶೇರ್ ಮಾಡಿ

ಇಸ್ಲಾಮಾಬಾದ್, ಫೆ.15- ವಿಶ್ವಸಂಸ್ಥೆಯಿಂದ ಜಾಗತಿಕ ಉಗ್ರನೆಂಬ ಹಣೆಪಟ್ಟಿ ಹೊತ್ತಿರುವ 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಗೆ ಪಾಕಿಸ್ತಾನದ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿತ್ತು.  ಈಗ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆ (ಎಫ್‍ಎಟಿಎಫ್) ತೀರ್ಪಿನ ನಂತರ ಆತನನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಫೆ.16ರಂದು ಪ್ಯಾರಿಸ್‍ನಲ್ಲಿ ನಡೆಯಲಿರುವ ಎಫ್‍ಎಟಿಎಫ್ ಸಭೆಯಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಬೇಕೆ ಬೇಡವೇ ಎಂಬ ಬಗ್ಗೆ ತೀರ್ಮಾನಿಸಲಿದೆ. ಎಫ್‍ಎಟಿಎಫ್‍ನ ಒತ್ತಡದಿಂದಾಗಿ ಪಾಕಿಸ್ತಾನದ ನ್ಯಾಯಾಲಯ ಹಫೀಜ್ ಸಯೀದ್‍ಗೆ ಭಯೋತ್ಪಾದನೆಗೆ ಸಂಬಂಧಿಸಿದಂತೆ ಜೈಲು ಶಿಕ್ಷೆ ವಿಧಿಸಿದೆ.

ಎಫ್‍ಎಟಿಎಫ್ ಪಾಕಿಸ್ತಾನದ ವಿಷಯದಲ್ಲಿ ತೀರ್ಮಾನ ಕೈಗೊಂಡ ನಂತರ ಪಾಕ್‍ನ ಭಯೋತ್ಪಾದನೆ ನಿಗ್ರಹ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಹಫೀಜ್ ಸಯೀದ್‍ನ ವಕೀಲರು ಹೇಳಿದ್ದಾರೆ.  ಈ ಹಿನ್ನೆಲೆಯಲ್ಲಿ ಹಫೀಜ್ ಸಯೀದ್ ಜೈಲು ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

Facebook Comments