“ಸದ್ಯಕ್ಕೆ ಅಂಗನವಾಡಿ ಕಾರ್ಯಕರ್ತೆ-ಸಹಾಕಿಯರ ಗೌರವಧನ ಹೆಚ್ಚಳ ಇಲ್ಲ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಸೆ.24- ಸದ್ಯದ ಪರಿಸ್ಥಿತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಸಹಾಕಿಯರ ಮಾಸಿಕ ಗೌರವಧನವನ್ನು ಹೆಚ್ಚಳ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಆಚಾರ್ ಹಾಲಪ್ಪ ವಿಧಾನಸಭೆಯಲ್ಲಿಂದು ತಿಳಿಸಿದರು.

ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನವಾಗಿ ನೀಡುತ್ತಿದ್ದೇವೆ. ಗೌರವಧನ ಜೀವನೋಪಾಯಕ್ಕೆ ಸಾಕಾಗುವುದಿಲ್ಲ ಎಂದರು.

1-11-2009ರಿಂದ ಅನ್ವಯವಾಗುವಂತೆ ಅಂಗನವಾಡಿ ಸಹಾಯಕಿಯರಿಗೆ 250 ರೂ. ಗೌರವಧನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಇದನ್ನುಪರಿಗಣಿಸಲಿಸಲಿದೆ ಎಂದು ಆಶ್ವಾಸನೆ ಕೊಟ್ಟರು.

Facebook Comments

Sri Raghav

Admin