ಜಿಲ್ಲಾ ಪ್ರಾತಿನಿಧ್ಯಕ್ಕಾಗಿ ನನಗೆ ಸಚಿವ ಸ್ಥಾನ : ಸಚಿವ ಹಾಲಪ್ಪ ಆಚಾರ್

ಈ ಸುದ್ದಿಯನ್ನು ಶೇರ್ ಮಾಡಿ

ಕೊಪ್ಪಳ, ಆ.8- ಮೊದಲಿನಿಂದಲೂ ನಮ್ಮ ಕೊಪ್ಪಳ ಜಿಲ್ಲಾಗೆ ಸಂಪುಟದಲ್ಲಿ ಪ್ರಾತಿನಿಧ್ಯ ಕೊಡಬೇಕು ಎಂಬ ಮಾತನ್ನು ಹೇಳಿದ್ದ. ಈಗ ನನಗೆ ಅವಕಾಶ ಲಭಿಸಿದೆ. ಇದರಲ್ಲಿ ಬೇರೆ ಯಾವ ಅರ್ಥ ಇಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನೂತನ ಸಚಿವ ಹಾಲಪ್ಪ ಆಚಾರ್ ಹೇಳಿದರು.

ಸಚಿವರಾದ ಬಳಿಕ ಮೊದಲ ಬಾರಿಗೆ ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ ಖಾತೆ ಕೊಟ್ಟರೂ ಕೆಲಸ ಮಾಡಬೇಕು. ಜನರು ನಮ್ಮನ್ನು ಶಾಸಕರಾಗಿ ಆಯ್ಕೆ ಮಾಡಿದ್ದಾರೆ. ರಾಜ್ಯದಲ್ಲಿ ಕೆಲಸ ಮಾಡಲು ಒಂದೊಂದು ಖಾತೆ ಕೊಟ್ಟಿದ್ದಾರೆ. ಕೊಟ್ಟ ಖಾತೆಯಲ್ಲಿ ಸರಿಯಾಗಿ ಕೆಲಸ ಮಾಡಬೇಕು ಎಂದ ಅವರು, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಉತ್ತಮ ಯುವ ನಾಯಕ. 2023ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ನಾವು 2023ಕ್ಕೆ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಚುನಾವಣೆಗೆ ಹೋಗುತ್ತೇವೆ ಎಂದು ಪರೋಕ್ಷವಾಗಿ ಬೊಮ್ಮಾಯಿ ತಮ್ಮ ನಾಯಕ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದರು. ಹಿಂದೆ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ. ನನ್ನ ಟ್ರೇನ್ ಯಾವತ್ತೂ ಹಿಂದೆ ಹೋಗುವುದಿಲ್ಲ. ನಾನು ಮುಂದೆ ಮಾತ್ರ ನೋಡುತ್ತೇನೆ. ನನಗೆ ಕೊಟ್ಟಿರುವ ಎರಡು ಇಲಾಖೆಗಳು ಅತ್ಯಂತ ಮಹತ್ವದ ಇಲಾಖೆಗಳು. ನಾನು ಎರಡು ಇಲಾಖೆಗಳಿಗೆ ಹೊಸ ಕೊಡುಗೆಯನ್ನು ಕೊಡುತ್ತೇನೆ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಬಸವರಾಜ ದಡೆಸಗೂರು, ಪರಣ್ಣ ಮುನವಳ್ಳಿ, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಸಿ.ವಿ.ಚಂದ್ರಶೇಖರ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಪಾಟೀಲï, ಜಿ.ಪಂ.ಸದಸ್ಯ ಗವಿಸಿದ್ದಪ್ಪ ಕರಡಿ ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.

Facebook Comments