71ನೇ ಗಣರಾಜ್ಯೋತ್ಸವ : ಪ್ರಧಾನಿ ಸೇರಿ ಗಣ್ಯಾತಿಗಣ್ಯರ ಶುಭಾಶಯ

ಈ ಸುದ್ದಿಯನ್ನು ಶೇರ್ ಮಾಡಿ

ನವದೆಹಲಿ,ಜ.26-ದೇಶದಾದ್ಯಂತ 71ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ನಿಮಿತ್ತ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಸಚಿವರು ಸೇರಿದಂತೆ ಅನೇಕ ಗಣ್ಯಾತಿಗಣ್ಯರು ರಾಷ್ಟ್ರದ ಜನತೆಗೆ ಶುಭಾಶಯ ಕೋರಿದ್ದಾರೆ. ದೇಶದ ಪ್ರತೀಯೊಬ್ಬ ಪ್ರಜೆಗೂ ಗಣರಾಜ್ಯೋತ್ಸವ ದಿನಾಚರಣೆಯ ಶುಭಾಶಯಗಳು. ಜೈ ಹಿಂದ್! ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಾಜಿ ಪ್ರಧಾನಿಗಳಾದ ಎಚ್.ಡಿ.ದೇವೇಗೌಡರು, ಡಾ.ಮನಮೋಹನ್ ಸಿಂಗ್, ಕೇಂದ್ರ ಸಚಿವರಾದ ಅಮಿತ್ ಷಾ , ರಾಜನಾಥ ಸಿಂಗ್, ನಿರ್ಮಲಾ ಸೀತಾರಾಮನ್, ಪ್ರಕಾಶ್ ಜಾವ್ಡೇಕರ್, ರಮೇಶ್ ಪೊಕ್ರಿಯಲ್ ನಿಶಾಂಕ್, ಡಿ.ವಿ.ಸದಾನಂದಗೌಡ, ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ,

ಸ್ಮೃತಿ ಇರಾನಿ ಹಾಗೂ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‍ಗಾಂಧಿ, ಗುಲಾಂನಬಿ ಅಜಾದ್, ಮಮತಾ ಬ್ಯಾನರ್ಜಿ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರು ಸಹ ಗಣತಂತ್ರ ದಿವಸದ ಶುಭಾಶಯ ಕೋರಿದ್ದಾರೆ.

Facebook Comments