ಹರೀಶ್ ಆರಾಧ್ಯಗೆ ವೀರಶೈವ ಲಿಂಗಾಯಿತ ನಿಗಮಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಜೂ.12- ರಾಜ್ಯ ಸರ್ಕಾರ ಸ್ಥಾಪನೆ ಮಾಡಲು ಉದ್ದೇಶಿಸಿರುವ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ಮಂಡಳಿಗೆ ಆರ್.ಹರೀಶ್ ಆರಾಧ್ಯರ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಅಖಿಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ.

ಈ ಸಂಬಂಧ ಅಖಿಲ ಭಾರತ ವೀರಶೈವ ಮಹಾಸಭಾದ ಮುಖಂಡ ಕೇಶವಕುಮಾರ್.ಎನ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವೀರಶೈವ ಲಿಂಗಾಯಿತ ಅಭಿವೃದ್ಧಿ ಮಂಡಳಿಗೆ ಹರೀಶ್ ಆರಾಧ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದಾರೆ.

ಕಳೆದೆರಡು ದಶಕಗಳಿಂದ ಬಿಜೆಪಿಯಲ್ಲಿ ಸಕ್ರಿಯ ಕಾರ್ಯಕರ್ತರಾಗಿ ದುಡಿದಿರುವ ಅವರು ಲೋಕಸಭೆ, ವಿಧಾನಸಭೆ, ಬಿಬಿಎಂಪಿ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಒಬ್ಬ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದಾರೆ.

ಅಲ್ಲದೆ ವೀರಶೈವ ಲಿಂಗಾಯಿತ ಸಮಾಜದ ಅನೇಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಮಾನ್ಯರಲ್ಲಿ ಅತಿಸಾಮಾನ್ಯರಾಗಿರುವ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದರೆ ಮಂಡಳಿಯನ್ನು ಯಶಸ್ವಿಯಾಗಿ ಮುನ್ನೆಡೆಸುತ್ತಾರೆ ಎಂದು ಕೇಶವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆ ಹಲವು ವರ್ಷಗಳಿಂದ ಗುರುತಿಸಿಕೊಂಡಿದ್ದು, 2006ರಲ್ಲಿ ಅವರು ಉಪಮುಖ್ಯಮಂತ್ರಿಯಾದ ವೇಳೆ ಆಪ್ತ ಸಹಾಯಕನಾಗಿಯೂ ಸೇವೆ ಸಲ್ಲಿಸಿದ್ದಾರೆ.

ಕಳೆದ 12 ವರ್ಷಗಳಿಂದ ಅಖಿಲಭಾರತ ವೀರಶೈವ ಮಹಾಸಭಾ ಬೆಂಗಳೂರಿನ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಘಟಕದ ಕಾರ್ಯ ನಿವಾರ್ಹಕ ಕಾರ್ಯ ಸಮಿತಿಯ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ.

ಹೀಗೆ ಸಮುದಾಯದ ಏಳಿಗೆಗಾಗಿ ತೊಡಗಿಸಿಕೊಂಡಿರುವ ಅವರನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಬೇಕೆಂದು ಕೇಶವಕುಮಾರ್ ಮನವಿ ಮಾಡಿದ್ದಾರೆ.

Facebook Comments

Sri Raghav

Admin