ಹರಿಯಾಣದಲ್ಲಿ ಗಾಂಧಿ-ನೆಹರು ಕುಟುಂಬದ ಆಸ್ತಿಗಳ ತನಿಖೆಗೆ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

ಹರಿಯಾಣ,ಜು.27- ಗಾಂಧಿ-ನೆಹರು ಕುಟುಂಬದ ಒಡೆತನದಲ್ಲಿರುವ ಆಸ್ತಿಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ , ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರ ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಗಾಂಧಿ ಕುಟುಂಬಕ್ಕೆ ಸಂಬಂಧಿಸಿರುವ ಆಸ್ತಿಗಳ ಬಗ್ಗೆ ತನಿಖೆ ನಡೆಸುವಂತೆ ಹರಿಯಾಣ ಮುಖ್ಯ ಕಾರ್ಯದರ್ಶಿ ಕೇಶ್ನಿ ಆನಂದ್ ಅರೋರಾ ಹರಿಯಾಣ ನಗರ ಸ್ಥಳೀಯ ಸಂಸ್ಥೆಗಳ ಇಲಾಖೆಗೆ ಸೂಚನೆ ನೀಡಿದ್ದಾರೆ.

ಗಾಂಧಿ ಕುಟುಂಬ ನಿರ್ವಹಿಸುತ್ತಿರುವ ಮೂರು ಟ್ರಸ್ಟ್‍ಗಳಾದ ರಾಜೀವ್ ಗಾಂಧಿ ಫೌಂಡೇಶನ್, ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಮತ್ತು ಇಂದಿರಾ ಗಾಂಧಿ ಸ್ಮಾರಕ ಟ್ರಸ್ಟ್ ಬಗ್ಗೆ ತನಿಖೆ ನಡೆಸಲು ಗೃಹ ಸಚಿವಾಲಯ (ಎಂಎಚ್‍ಎ) ಒಂದು ಸಮಿತಿಯನ್ನು ರಚಿಸಿತ್ತು.

ಭೂಪೇಂದ್ರ ಸಿಂಗ್ ಹೂಡಾ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ 2004 ಮತ್ತು 2014ರ ನಡುವಿನ ಗಾಂಧಿ ಕುಟುಂಬ ಆಸ್ತಿಗಳ ಬಗ್ಗೆ ತನಿಖೆ ನಡೆಸಲು ಕೂಡ ಹರಿಯಾಣ ಸರ್ಕಾರ ಆದೇಶಿಸಿದೆ.

ನೆಹರೂ-ಗಾಂಧಿ ಕುಟುಂಬದ ಒಡೆತನದ ಆಸ್ತಿ ಮತ್ತು ಇತರ ಆಸ್ತಿಗಳನ್ನು ಪಟ್ಟಿ ಮಾಡುವಂತೆ ನಗರ ಸ್ಥಳೀಯ ಸಂಸ್ಥೆಗಳ ಇಲಾಖೆಯನ್ನು ಕೇಳಿಕೊಳ್ಳುವುದರ ಜೊತೆಗೆ ಹರಿಯಾಣ ಮುಖ್ಯ ಕಾರ್ಯದರ್ಶಿ ಕೇಶ್ನಿ ಆನಂದ್ ಅರೋರಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಮೂರು ಸಂವಹನಗಳನ್ನು ಕಳುಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಜೊತೆಗೆ ವಿದೇಶಿ ಕೊಡುಗೆಗಳ ಬಗ್ಗೆ ಕೇಂದ್ರ ಸರ್ಕಾರದಿಂದ ಸರ್ಕಾರಕ್ಕೆ ಸಂವಹನ ಬಂದ ನಂತರ ಹರಿಯಾಣ ಸರ್ಕಾರ ಈ ಕ್ರಮ ಕೈಗೊಂಡಿದೆ.

ಹರಿಯಾಣದ ಮಾಜಿ ಸಿಎಂ ಭೂಪೇಂದ್ರ ಸಿಂಗ್ ಹೂಡಾ ಅವರು 2005 ರಲ್ಲಿ ಮುಖ್ಯಮಂತ್ರಿಯಾದ ನಂತರ ಆರು ತಿಂಗಳೊಳಗೆ 23 ವರ್ಷದ ಹಿಂದಿನ ದರದಲ್ಲೇ ಎಜೆಎಲ್‍ಗೆ ಫ್ಲಾಟ್‍ನ್ನು ಮಂಜೂರು ಮಾಡಿದ್ದರು.

ಜಾರಿನಿರ್ದೇಶನಾಲಯ ಈಗಾಗಲೇ ಇದನ್ನು ದಾಖಲಿಸಿಕೊಂಡಿದೆ.
ಭೂಪೇಂದ್ರ ಸಿಂಗ್ ಹೂಡಾ ಅವರು ಈ ಆರೋಪಗಳನ್ನು ನಿರಾಕರಿಸಿದ್ದು, ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾಟಗಾತಿಯ ಬೇಟೆಯಲ್ಲಿ ತೊಡಗಿದೆ ಎಂದು ದೂರಿದ್ದಾರೆ.

Facebook Comments

Sri Raghav

Admin