ಹಾಸನಾಂಬ ದೇವಿಯ ಹುಂಡಿ ಕಾಣಿಕೆ ಎಣಿಕೆ ಕಾರ್ಯ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ, ಅ.30- ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿಯ ದರ್ಶನ ಮುಕ್ತಾಯದ ನಂತರ ಇಂದು ಭಕ್ತರು ಸಲ್ಲಿಸಿದ್ದ ಕಾಣಿಕೆ ಎಣಿಕೆ ಕಾರ್ಯ ನಡೆದಿದೆ. ರಾಜ್ಯದ ನಾನಾ ಮೂಲೆಗಳಿಂದ ಲಕ್ಷಾಂತರ ಮಂದಿ ನಿನ್ನೆವರೆಗೂ ದರ್ಶನ ಪಡೆದು ದೇವಿಗೆ ಹರಕೆ ಸಲ್ಲಿಸಿದ್ದಾರೆ.

ಧಾರ್ಮಿಕ ವಿಧಿ-ವಿಧಾನಗಳ ಪ್ರಕಾರ ಇಂದು ದೇಗುಲದ ಬಾಗಿಲು ಮುಚ್ಚಲಾಗಿದ್ದು, ಭಕ್ತರು ಸಲ್ಲಿಸಿದ್ದ ಕಾಣಿಕೆ ಎಣಿಕೆ ಕಾರ್ಯ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ನಡೆದಿದೆ.  ಪ್ರತಿ ಬಾರಿಯಂತೆ ಈ ಬಾರಿಯೂ ಕೆಲ ಭಕ್ತರು ಪತ್ರಗಳನ್ನು ಕೂಡ ಹುಂಡಿಕೆ ಹಾಕಿದ್ದು, ತಮ್ಮ ಇಷ್ಟಾರ್ಥ ಈಡೇರಿಸುವಂತೆ ದೇವಿಯಲ್ಲಿ ಪ್ರಾರ್ಥಿಸಿದ್ದಾರೆ.

ಚಿನ್ನ-ಬೆಳ್ಳಿ ಆಭರಣ ಸೇರಿದಂತೆ ಲಕ್ಷಾಂತರ ರೂ. ಕಾಣಿಕೆ ಸಂಗ್ರಹವಾಗಿದ್ದು, ಇಂದು ರಾತ್ರಿ ವೇಳೆಗೆ ನಿಖರ ಮಾಹಿತಿ ಲಭ್ಯವಾಗಲಿದೆ.

Facebook Comments