ವಿವಿಐಪಿಗಳಿಗೆ ಮಾತ್ರ ಹಾಸನಾಂಬ ದರ್ಶನ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ, ಅ.9- ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಈ ಬಾರಿ ಹಾಸನಾಂಬ ನೇರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಸ್ಪಷ್ಟಪಡಿಸಿದರು.

ಜಿಲ್ಲಾ ಧಿಕಾರಿ ಕಚೇರಿಯಲ್ಲಿ ಅಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷದಂತೆ ಹಾಸನಾಂಬ ದರ್ಶನಕ್ಕೆ ಅವಕಾಶ ನೀಡದೆ ದೇವಸ್ಥಾನ ತೆರೆಯುವ ನ.5ರಂದು ಮಾತ್ರ ವಿವಿಐಪಿಗಳಿಗೆ ದರ್ಶನ ಅವಕಾಶ ಕಲ್ಪಿಸಲಾಗಿದೆ. ದೇವಸ್ಥಾನದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಕೊರೊನಾ ನೆಗೆಟಿವ್ ವರದಿ ಕಡ್ಡಾಯ ಎಂದು ತಿಳಿಸಿದರು.

ನ.5 ರಿಂದ 16ರ ವರೆಗೆ ಹಾಸನಾಂಬ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ .ನಗರದ 12 ಕಡೆ ಎಲ್ ಇಡಿ ದೊಡ್ಡ ಪರದೆ ಮೂಲಕ ಹಾಸನಾಂಬೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. ಸಾರ್ವಜನಿಕರ ನೇರ ದರ್ಶನಕ್ಕೆ ಅವಕಾಶ ನೀಡಿದರೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಈ ಬಾರಿ ಇಂತಹ ಕ್ರಮ ವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಹಾಸನಾಂಬ ದರ್ಶನಾರಂಭ ದಿನ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟನೆ ಮಾಡಲಿದ್ದಾರೆ ಇದೇ ವೇಳೆ ತಿಳಿಸಿದರು. ಕೊರೊನಾ ಕಾರಣ ಸಾರ್ವಜನಿಕವಾಗಿ ಹಾಸನಾಂಬ ದರ್ಶನ ಇರುವುದಿಲ್ಲ. ಇದಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು.

Facebook Comments

Sri Raghav

Admin