ಎಲ್ಲಾ ಬಗೆಯ ವಾಹನಗಳಿಗೆ ಶಿರಾಡಿಘಾಟ್ ಸಂಚಾರ ಮುಕ್ತ

ಈ ಸುದ್ದಿಯನ್ನು ಶೇರ್ ಮಾಡಿ

sriradi gatಹಾಸನ, ನ.15- ಬೆಂಗಳೂರು- ಮಂಗಳೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ-75(48)ರಲ್ಲಿ 237.00 ಕಿ.ಮೀ. ರಿಂದ 256.70 ಕಿ.ಮೀ. ವರೆಗಿನ ಜಿಲ್ಲಾ ವ್ಯಾಪ್ತಿಯ ಶಿರಾಡಿಘಾಟ್ ರಸ್ತೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಇಂದಿನಿಂದ ಎಲ್ಲಾ ಬಗೆಯ ವಾಹನಗಳಿಗೆ ಸಂಚಾರ ಮುಕ್ತಗೊಳಿಸಿಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ನೀಡಿದ್ದಾರೆ. ಈ ಆದೇಶದನ್ವಯ ಸದರಿ ರಸ್ತೆಯಲ್ಲಿ ಹಾಗೂ ಏಕಮುಖ ಸಂಚಾರ ಇರುವ ಸ್ಥಳಗಳಲ್ಲಿ ಪೊಲೀಸ್ ಇಲಾಖಾ ವತಿಯಿಂದ ಸಿಬ್ಬಂದಿಯವರನ್ನು ನೇಮಕಗೊಳಿಸಲು ಪೊಲೀಸ್ ಅಧೀಕ್ಷಕರಿಗೆ ನಿರ್ದೇಶಿಸಿದೆ.

ಈ ಬಗ್ಗೆ ಕಾರ್ಯಪಾಲಕ ಇಂಜಿನಿಯರ್ ಮತ್ತು ಹೆದ್ದಾರಿ ಆಡಳಿತ, ರಾಷ್ಟ್ರೀಯ ಹೆದ್ದಾರಿ ವಿಭಾಗ, ಹಾಸನ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ, ಸಕಲೇಶಪುರ ರವರು ವಾಹನಗಳ ಸಂಚಾರಕ್ಕಾಗಿ ಅವಶ್ಯವಿರುವ ಸೂಚನಾಫಲಕ ಅಳವಡಿಸಲು ಮತ್ತು ಸಾರ್ವಜನಿಕರ ಮಾಹಿತಿಗಾಗಿ ವ್ಯಾಪಕ ಪ್ರಚಾರಕ್ಕೆ ಕ್ರಮಕೈಗೊಳ್ಳಲು ತಿಳಿಸಿದೆ.

ಕಾರ್ಯಪಾಲಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ ವಿಭಾಗ, ಹಾಸನ ಮತ್ತು ಯೋಜನಾ ನಿರ್ದೇಶಕರು, ಪಿ.ಐ.ಯು, ಹಾಸನ ರವರನ್ನು ರಸ್ತೆ ಸಂಚಾರದ ತಾಂತ್ರಿಕ ವ್ಯವಸ್ಥೆಗೆ ಇವರುಗಳನ್ನು ಜವಾಬ್ದಾರಿಯುತರನ್ನಾಗಿಸಿ ಆದೇಶಿಸಿದೆ.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ