ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

ಈ ಸುದ್ದಿಯನ್ನು ಶೇರ್ ಮಾಡಿ

ಹಾಸನ, ಮೇ 28-ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದ್ದು, ನಿಟ್ಟುಸಿರು ಬಿಡುವಂತಾಗಿದೆ.  ಅರಸೀಕೆರೆ ತಾಲೂಕಿನ ಸಂಕೋಡನಹಳ್ಳಿ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಆಡು, ಕುರಿ, ನಾಯಿಗಳನ್ನು ಹೊತ್ತೊಯ್ದು ತಿನ್ನುತ್ತಾ ಗ್ರಾಮಸ್ಥರ ನಿದ್ದೆಗೆಡಿಸಿತ್ತು.

ಚಿರತೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮದ ಸಿದ್ದಯ್ಯ ಎಂಬುವರ ಜಮೀನಿನಲ್ಲಿ ಬೋನಿಡಲಾಗಿತ್ತು. ಆಹಾರ ಅರಸಿ ಬಂದ ಚಿರತೆ ಬೋನಿಗೆ ಸೆರೆ ಸಿಕ್ಕಿದೆ. ಗ್ರಾಮಸ್ಥರು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅಧಿಕಾರಿಗಳು ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಕೊಂಡೊಯ್ದಿದ್ದಾರೆ.

Facebook Comments