ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ತೆ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಲಖ್ನೋ,ಸೆ.29- ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 19 ವರ್ಷದ ಯುವತಿ ಇಂದು ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಈಕೆಗೆ ಪಾಶ್ರ್ವವಾಯು ಬಡಿದಿತ್ತು. ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಅತ್ಯಾಚಾರಕ್ಕೊಳಗಾಗಿ ಕಳೆದ 15 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸಂತ್ರಸ್ತೆ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಸೆಪ್ಟೆಂಬರ್ 14ರಂದು ತಮ್ಮ ದನಗಳಿಗೆ ಮೇವು ತರಲು ಹೋಗಿದ್ದಾಗ ಸಂತ್ರಸ್ತೆಯನ್ನು ಹೊಲಕ್ಕೆ ಎಳೆದೊಯ್ದು ಕಾಮುಕರು ಅತ್ಯಾಚಾರವೆಸಗಿದ್ದರು.

ಆಕೆ ಹೊದಿದ್ದ ದುಪ್ಪಟ್ಟದಿಂದ ಆಕೆಯನ್ನು ಎಳೆದೊಯ್ದಿದ್ದರಿಂದ ಆಕೆಯ ಬೆನ್ನುಹುರಿಗೆ ತೀವ್ರತರದ ಗಾಯಗಳಾಗಿದ್ದವು. ಅಂದಿನಿಂದ ಆಕೆ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಇಂದು ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

Facebook Comments

Sri Raghav

Admin