ದೇವೇಗೌಡರ ನಿವಾಸಕ್ಕೆ ಆದಿಚುಂಚನಗಿರಿ ಶ್ರೀಗಳ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಡಿ.10-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆದಿಚುಂಚನಗಿರಿ ಮಠದ ಪೀಠಾಧಿಪತಿ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಭೇಟಿಯಾಗಿದ್ದರು. ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಸ್ವಾಮೀಜಿ ಕೆಲ ಕಾಲ ಸಮಾಲೋಚನೆ ನಡೆಸಿದ್ದಾರೆ.

ದೇವೇಗೌಡರ ಆರೋಗ್ಯ ವಿಚಾರಿಸಲು ಸ್ವಾಮೀಜಿ ಅವರು ಆಗಮಿಸಿದ್ದರು ಇದೊಂದು ಸೌಹಾರ್ದಯುತ ಭೇಟಿ ಎಂದು ಉನ್ನತ ಮೂಲಗಳು ತಿಳಿಸಿವೆ. ವಿಧಾನಸಭೆ ಉಪಚುನಾವಣೆ ಫಲಿತಾಂಶದ ಬೆನ್ನಲ್ಲೇ ಸ್ವಾಮೀಜಿಯವರು ಗೌಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಂತಾಗಿದೆ.

Facebook Comments