ದೇವೇಗೌಡರನ್ನು ಭೇಟಿ ಮಾಡಿದ ನಂಜಾವಧೂತ ಶ್ರೀಗಳು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.26- ಇತ್ತೀಚಿನ ಬೆಳವಣಿಗೆಗಳ ಕುರಿತಂತೆ ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಶ್ರೀನಂಜಾವಧೂತ ಸ್ವಾಮೀಜಿಯವರು ಇಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಬೆಳಗ್ಗೆ ಆಗಮಿಸಿದ ಶ್ರೀಗಳು, ದೇವೇಗೌಡರನ್ನು ಭೇಟಿಯಾಗಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಗೊತ್ತಾಗಿದೆ.

ಒಕ್ಕಲಿಗ ಸಮುದಾಯಕ್ಕೆ ಪ್ರಾಧಿಕಾರ ರಚನೆ ಮಾಡುವುದು, ಮೀಸಲಾತಿ ಹೆಚ್ಚಳ ಸೇರಿದಂತೆ ಇತ್ತೀಚೆಗೆ ತೆಗೆದುಕೊಂಡಿರುವ ತೀರ್ಮಾನಗಳ ಬಗ್ಗೆ ಮಾಹಿತಿ ವಿನಿಯಮ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಳೆದವಾರವಷ್ಟೇ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠದಲ್ಲಿ ಒಕ್ಕಲಿಗ ಸಮುದಾಯಕ್ಕೆ ಅಭಿವೃದ್ಧಿ ಪ್ರಾಧಿಕಾರ, ಹಾಲಿ ಇರುವ ಮೀಸಲಾತಿಯನ್ನು ಹೆಚ್ಚಳ ಮಾಡುವ ಸಂಬಂಧ ಸಭೆ ನಡೆದಿತ್ತು.

ಸರ್ಕಾರದ ಪರವಾಗಿ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು. ಈ ಎಲ್ಲ ಬೆಳವಣಿಗೆಗಳ ಕುರಿತಂತೆ ಶ್ರೀಗಳು ದೇವೇಗೌಡರಿಗೆ ಮಾಹಿತಿ ಒದಗಿಸಿದ್ದಾರೆ ಎಂದು ಹೇಳಲಾಗಿದೆ.

Facebook Comments