ಡಿಜೆ ಹಳ್ಳಿ ಗಲಭೆ ಕುರಿತು ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಯಾಗಲಿ : ದೇವೇಗೌಡರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.17-ನಗರದ ಡಿ.ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿ ಗಲಭೆ ಪ್ರಕರಣ ಕುರಿತು ಹೈಕೋರ್ಟ್ ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕು ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಆಗ್ರಹಿಸಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಪಕ್ಷದ ಶಾಸಕರು, ಮಾಜಿ ಶಾಸಕರು, ಜಿಲ್ಲಾ ಅಧ್ಯಕ್ಷರುಗಳು ಮತ್ತು ಜಿಲ್ಲಾ ಮುಖಂಡರ ಜೊತೆ ರಾಜ್ಯದಲ್ಲಿ ಹರಡಿತ್ತಿರುವ ಕೊರೊನ ವಿಷಯದ ಬಗ್ಗೆ ಮತ್ತು ರಾಜ್ಯ ಸರ್ಕಾರ ತಂದಿರುವ ಜನ ವಿರೋಧಿ ನೀತಿ ಕಾಯ್ದೆಗಳ ತಿದ್ದುಪಡಿ ವಿರುದ್ಧ ಜನ ಜಾಗೃತಿ ಮೂಡಿಸುವ ಬಗ್ಗೆ ಹಾಗೂ ಪಕ್ಷದ ಸಂಘಟನೆಯ ಬಗ್ಗೆ ಸಂವಾದ ನಡೆಸುವ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಡಿ.ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿ ಘಟನೆಗೆ ಕಾರಣ ಏನು? ಕಾಂಗ್ರೆಸ್ ಆಂತರಿಕ ವಿಚಾರದಿಂದ ಘಟನೆ ನಡೆದಿದ್ಯಾ? ಎಂಬುದರ ಬಗ್ಗೆ ನಾನು ಹೆಚ್ಚಿಗೆ ಮಾತಾಡಲ್ಲ ಎಂದರು.

ಈ ಪ್ರಕರಣದಲ್ಲಿ 300 ಕ್ಕಿಂತ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಆದರೆ, ನಿರಪರಾಧಿಗಳಿಗೆ ತೊಂದರೆ ಆಗಬಾರದು. ಸರ್ಕಾರ ಈ ಬಗ್ಗೆ ಯೋಚನೆ ಮಾಡಬೇಕು. ಸರ್ಕಾರಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸಿದೆ. ಇದರಿಂದ ಸತ್ಯಾಂಶ ಹೊರಬರಲು ಸಾಧ್ಯವಾಗೊಲ್ಲ.

ಈ ಹಿಂದೆ ನಡೆದ ಹಲವು ಘಟನೆಗಳ ತನಿಖೆ ಏನಾಗಿದೆ ಎಂದು ನನಗೆ ಗೊತ್ತಿದೆ ಎಂದು ಹೇಳಿದರು. ರಾಜ್ಯ ಸರ್ಕಾರ ಮಾಡಲು ಹೊರಟಿರುವ ಕೆಲವು ಕಾಯ್ದೆಗಳ ತಿದ್ದುಪಡಿ ವಿಚಾರದಲ್ಲಿ ನಾವು ಪ್ರತಿಭಟನೆ ಮಾಡ್ತಿದ್ದೇವೆ.

ಈ ವಿಚಾರದಲ್ಲಿ ನಾವು ನಮ್ಮ ಪಕ್ಷದ ನಾಯಕರ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡುತ್ತಿದ್ದೇವೆ. ಎಲ್ಲಾ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಿ, ಜಿಲ್ಲಾಧಿಕಾರಿ ಗಳಿಗೆ ಮನವಿ ನೀಡುತ್ತೇವೆ. ನಂತರ ಮುಖ್ಯಮಂತ್ರಿ ಗಳಿಗೂ ಮನವಿ ನೀಡುತ್ತೇವೆ ಎಂದರು.

ಭೂ ಸುಧಾರಣಾ ಕಾಯಿದೆ, ಎಪಿಎಂಸಿ ಕಾಯಿದೆ ಮತ್ತು ಕೈಗಾರಿಕಾ ಕಾಯಿದೆಗಳ ಸುಗ್ರೀವಾಜ್ಞೆ ಬಗ್ಗೆ ರಾಜ್ಯ ಸರ್ಕಾರದ ವಿರುಧ ಪ್ರತಿಭಟನೆ ಆರಂಭಿಸಿರುವ ಜೆಡಿಎಸ್ ಮುಂದಿನ ಹೋರಾಟದ ರೂಪುರೇಷೆ ಗಳ ಬಗ್ಗೆ ವಿಡೊಯೋ ಸಂವಾದದಲ್ಲಿ ಗಂಭೀರ ಚರ್ಚೆ ನಡೆಸಲಾಯಿತು.

ಜೆಪಿ ನಗರದ ನಿವಾಸದಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಹಾಸನದಿಂದ ಸಂಸದ ಪ್ರಜ್ವಲ್ ರೇವಣ್ಣ ಭಾಗಿ ಹಾಗೂ ಮೂವತ್ತು ಜಿಲ್ಲೆಗಳಿಂದ ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು.

ಸಾಮಾಜಿಕ ಅಂತರ ಕಾಪಾಡಿಕೊಂಡು ಹೋರಾಟ ಮಾಡೋಣ ಎಂದ ಗೌಡರು, ಪ್ರತಿ ಜಿಲ್ಲೆಗಳಲ್ಲಿ ಕೂಡಾ ಮುಖಂಡರ ಜೊತೆ ಕಾರ್ಯಕರ್ತರು ಹಾಗೂ ರೈತರು ಪಾಲ್ಗೊಳ್ಳಲಿ. ಪ್ರತಿಭಟನೆ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡೋಣ ಎಂದು ಸಂವಾದದಲ್ಲಿ ತಿಳಿಸಿದರು‌

Facebook Comments

Sri Raghav

Admin