ಅನರ್ಹರ ತೀರ್ಪಿನಿಂದ ಬಿಎಸ್ವೈ ಸರ್ಕಾರ ಮತ್ತಷ್ಟು ಸೇಫ್ ಆಗಿದೆ : ದೇವೇಗೌಡರು

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.13-ಅನರ್ಹ ಶಾಸಕರ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ತೀರ್ಪು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರ ಇನ್ನಷ್ಟು ಭದ್ರವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರ ಮುಖ್ಯಮಂತ್ರಿ ಸ್ಥಾನ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕನ ಸ್ಥಾನ ಎರಡೂ ಸೇಫ್ ಆಗಿವೆ ಎಂದರು. ವಿಧಾನಸಭಾಧ್ಯಕ್ಷರ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ ಎಂದು ಹೇಳಿದರು.

ಎಲ್ಲ ಕಡೆ ಸ್ಫರ್ಧೆ: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗಿದ್ದು, ನಾಮಪತ್ರ ಸಲ್ಲಿಸಲು ನ.18ರವರೆಗೂ ಕಾಲಾವಕಾಶವಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದೊಂದಿಗೆ ಮತ್ತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಲ್ಲ ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡುತ್ತೇವೆ.

15 ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಬೆಳಗಾವಿಯಲ್ಲಿ ಮೂರು ಕ್ಷೇತ್ರಗಳಿಗೆ ಬೇಡಿಕೆ ಇದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದ ನಂತರ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

# ಸಿದ್ದರಾಮಯ್ಯ ವಿರುದ್ಧ ಗರಂ:
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜೆಡಿಎಸ್‍ನಲ್ಲಿ ಸೆಕ್ಯುಲರಿಸಂ ಎಲ್ಲಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹಾಸನದಲ್ಲಿ ಸಿದ್ದರಾಮಯ್ಯ ಅವರು ಸೆಕ್ಯುಲರಿಸಂನ್ನು ವರ್ಗಾಯಿಸಿದ್ದಾರೆ ಎಂದು ಟೀಕಿಸಿದ ಅವರು, ಅದನ್ನು ವಾಪಸ್ ಪಡೆದುಕೊಳ್ಳಬೇಕಿದೆ. ಆ ಕಾಲವೂ ಬರುತ್ತದೆ.

ಸಿದ್ದರಾಮಯ್ಯನವರ ಮೂಲ ಎಲ್ಲಿತ್ತು, ಇವರು ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ ಹೋದ ಮೇಲೆ ನಮ್ಮ ಸೆಕ್ಯುಲರಿಸಂ ಹೋಯಿತೇ? ಕಾಲವೇ ನಿರ್ಣಯಿಸುತ್ತೇ? 130 ಶಾಸಕರನ್ನು ಕಾಂಗ್ರೆಸ್ ಕಳೆದ ಚುನಾವಣೆಯಲ್ಲಿ 78ಕ್ಕೆ ಕುಸಿಯಲಿಲ್ಲವೇ? ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಬಿ ಟೀಂ ಎಂದು ರಾಹುಲ್ ಅವರಿಂದ ಹೇಳಿಸಿದ್ದರು. ಈಗ ಸಿದ್ದರಾಮಯ್ಯ ಅವರೊಬ್ಬರೇ ಸೆಕ್ಯುಲರ್ ಲೀಡರ್ ಎಂದು ಗುಡುಗಿದರು.

ಪ್ರತಿಯೊಂದು ಹೊರಗೆ ತರುತ್ತೇನೆ. ಹೋರಾಡುವ ನೈತಿಕ ಶಕ್ತಿ ಇದೆ. ಕಾಲವೂ ಹತ್ತಿರಕ್ಕೆ ಬಂದಿದೆ ಎಂದು ಸಿದ್ದರಾಮಯ್ಯನವರ ವಿರುದ್ಧ ಹರಿಹಾಯ್ದರು. ನಿನ್ನೆ ವಿಧಾನಪರಿಷತ್ ಸದಸ್ಯರ ಸಭೆ ನಡೆಸಿದ್ದು, ಎಲ್ಲರೂ ಪಕ್ಷದ ಸಂಘಟನೆ, ಪಕ್ಷ ಉಳಿಸಿ ಬೆಳೆಸಲು ಸದಾಭಿಪ್ರಾಯಕ್ಕೆ ಬಂದಿದ್ದಾರೆ. ಈ ವಿಷಯವನ್ನು ಮಾಜಿ ಸಚಿವ ಬಸವರಾಜ್ ಹೊರಟ್ಟಿ ಅವರೇ ಬಹಿರಂಗಪಡಿಸಲಿದ್ದಾರೆ ಎಂದರು.

Facebook Comments

Sri Raghav

Admin