ಇಡಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವಂತೆ ದೇವೇಗೌಡರ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜು.13-ಇಡಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು‌ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಶರವೇಗದಲ್ಲಿ ಹರಡುತ್ತಿರುವ ಮಹಾಮಾರಿ ಕೊರೋನ ವೈರಸ್ ತಡೆಯಲು ರಾಜ್ಯ ಸರ್ಕಾರವು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೆ ತಿಂಗಳು 14ರ ರಾತ್ರಿ 8 ಗಂಟೆ ಯಿಂದ ಲಾಕ್ ಡೌನ್ ಜಾರಿ ಮಾಡಿರುವುದು ಸ್ವಾಗತಾರ್ಹ. ಇದರ ಜೊತೆಗೆ ರಾಜ್ಯಾದ್ಯಂತ ಲಾಕ್ ಡೌನ್ ಜಾರಿ‌ ಮಾಡುವಂತೆ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ನಮಗೆ ಆರೋಗ್ಯವೇ ಭಾಗ್ಯವಾದ್ದರಿಂದ ಮನೆಯಿಂದ ಹೊರ ಹೋಗಬೇಕಾದರೆ ಮಾಸ್ಕ್ ಧರಿಸಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಏನೇ ಮುಟ್ಟಬೇಕಾದರು ಸ್ಯಾನಿಟೈಸರ್ ನಿಂದ ಕೈ ಅನ್ನು ಸ್ವಚ್ಛ ಗೊಳಿಸಿ ನಂತರ ಮುಟ್ಟಿ.

ಮುಖ್ಯವಾದ ಕೆಲಸ ಕಾರ್ಯಗಳು ಇದ್ದರೆ ಮಾತ್ರ ಮನೆಯಿಂದ ಹೊರ ಬನ್ನಿ ಎಂದು ರಾಜ್ಯ ಹಾಗೂ ದೇಶದ ಜನತೆಯಲ್ಲಿ ಗೌಡರು ಮನವಿ ಮಾಡಿದ್ದಾರೆ. ಇನ್ನೊಂದು ಪ್ರಮುಖವಾದ ವಿಷಯ ಈ ಮಹಾಮಾರಿ ವೈರಸ್ಸನ್ನು ತಡೆಗಟ್ಟಲು ರಾಜ್ಯ ಸರ್ಕಾರ ಅನೇಕ ಪ್ಯಾಕೇಜುಗಳನ್ನು ಘೋಷಿಸಿದೆ.

ಅದರಲ್ಲಿ ಅವ್ಯವಹಾರ ನಡೆದಿದೆ ಎಂದು ಅನೇಕ ನಾಯಕರುಗಳು ಆಪಾದಿಸುತ್ತಿದ್ದಾರೆ. ಅದೇನೇ ಇದ್ದರೂ ಮುಂಬರುವ ಅಧಿವೇಶನದಲ್ಲಿ ಚರ್ಚೆ ಮಾಡಲಿ. ಈಗ ನಮಗೆ ಜನತೆಯ ಆರೋಗ್ಯ ಮುಖ್ಯ. ಮೊದಲು ನಾವೆಲ್ಲ ಅದರ ಕಡೆ ಗಮನ ಹರಿಸೋಣ.

ಸರ್ಕಾರವು ಸಹ ಇದರ ನಿಟ್ಟಿನಲ್ಲಿ ಕೆಲಸ ಮಾಡಬೇಕು. ನಾವೆಲ್ಲ ಜೊತೆಗಿದ್ದೇವೆ. ಜನತೆಯ ಆರೋಗ್ಯದ ಜೊತೆ ಚೆಲ್ಲಾಟ ಬೇಡ. ಇನ್ನು ಮುಂದಾದರು ಎಚ್ಚೆತ್ತು ಕೆಲಸ ಮಾಡಿ ಎಂದು ಅವರು‌ ಮನವಿ ಮಾಡಿದ್ದಾರೆ.

Facebook Comments

Sri Raghav

Admin