ಟೆಲಿಫೋನ್ ಕದ್ದಾಲಿಕೆ ಪ್ರಕರಣ ಕುರಿತು ದೇವೇಗೌಡರ ಮೊದಲ ರಿಯಾಕ್ಷನ್ ಏನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.19- ಟೆಲಿಫೋನ್ ಕದ್ದಾಲಿಕೆ ಆರೋಪದ ಪ್ರಕರಣವನ್ನು ಸಿಬಿಐಗೆ ವಹಿಸುವಲ್ಲಿ ಬಿಜೆಪಿ ಕೇಂದ್ರ ನಾಯಕರು ಮಧ್ಯ ಪ್ರವೇಶ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ದೇಶದ ವಿಚಾರದಲ್ಲಿ ಹೆಚ್ಚು ಗಮನ ಹರಿಸಿದ್ದಾರೆ. ಆದರೆ, ಫೋನ್ ಕದ್ದಾಲಿಕೆ ವಿಚಾರದಲ್ಲಿ ಅವರು ಮಧ್ಯ ಪ್ರವೇಶಿಸಿಲ್ಲ. ಅವರ ಸೂಚನೆ ಮೇರೆಗೆ ಸಿಬಿಐಗೆ ವಹಿಸಲಾಗಿದೆ ಎಂಬುದನ್ನು ಅವರು ಅಲ್ಲಗಳೆದರು.

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಈ ತೀರ್ಮಾನ ಕೈಗೊಂಡಿದ್ದಾರೆ ಎಂಬುದನ್ನು ಪರೋಕ್ಷವಾಗಿ ಹೇಳಿದ ಅವರು, ಈ ರಾಜಕೀಯ ಒತ್ತಡಗಳಿಂದ ಸಿಬಿಐ ತನಿಖೆಗೆ ವಹಿಸಿರಬಹುದು ಎಂದರು.

ಈ ಪ್ರಕರಣವನ್ನು ಮಾಧ್ಯಮಗಳಲ್ಲಿ ಇಷ್ಟೊಂದು ವಿಜೃಂಭಿಸುವ ಅಗತ್ಯವಿಲ್ಲ. ಸುಪ್ರೀಂಕೋರ್ಟ್ ಪಕ್ಷಾಂತರ ವಿಚಾರದಲ್ಲಿ ಟೆಲಿಫೋನ್ ಟ್ಯಾಪ್ ಮಾಡುವುದು ತಪ್ಪಲ್ಲ ಎಂದು ಪ್ರಕರಣವೊಂದರಲ್ಲಿ ಹೇಳಿದೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪರೇಷನ್ ಕಮಲದ ಬಗ್ಗೆಯೂ ತನಿಖೆಯಾಗಲಿ ಎಂದು ಹೇಳಿದ್ದಾರೆ. ಈ ಹಿಂದೆ ಯಡಿಯೂರಪ್ಪ ಸಿಬಿಐಗೆ ಯಾವುದೇ ಪ್ರಕರಣ ಕೊಡುವುದಿಲ್ಲ ಎಂದು ಹೇಳಿದ್ದನ್ನು ನಾನು ಗಮನಿಸಿದ್ದೇನೆ.

ಈ ಹಿಂದೆ ಯಡಿಯೂರಪ್ಪ ನಂತರ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಅಧಿಕಾರಾವಧಿಯಲ್ಲಿ ನಡೆದಿರುವ ಫೋನ್ ಕದ್ದಾಲಿಕೆ ವಿಷಯವನ್ನು ತನಿಖೆಗೆ ಒಳಪಡಿಸಲಿ ಎಂದರು.

Facebook Comments

Sri Raghav

Admin