ಬೆಲೆ ಏರಿಕೆ ಬಗ್ಗೆ ದೇವೇಗೌಡರು ಹೇಳಿದ್ದೇನು ಗೊತ್ತೇ..?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.24- ಕಾವೇರಿ ನದಿ ನೀರನ್ನು ಬಿಟ್ಟು ಕೊಡುವುದಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದರು. ಬೆಂಗಳೂರುನಗರ ಜೆಡಿಎಸ್ ಘಟಕ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದ್ದು, ನಮ್ಮನ್ನು ನೀರನ್ನು ಬಿಟ್ಟು ಕೊಡುವುದಿಲ್ಲ. ಅದಕ್ಕಾಗಿ ಹೋರಾಟ ಮಾಡಲಾಗುವುದು ಎಂದು ಹೇಳಿದರು.

ಜಾತ್ಯತೀತ ಪಕ್ಷವಾಗಿ ದಿನನಿತ್ಯದ ಅಗತ್ಯವಸ್ತುಗಳ ಬೆಲೆ ಏರಿಕೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ದ ಹೋರಾಟ ಮಾಡಲಾಗುವುದು. ಯಾವ ಸರ್ಕಾರದ ಬಗ್ಗೆಯೂ ದಾಕ್ಷೀಣ್ಯ ತೋರಿಸುವುದಿಲ್ಲ. ರಾಜಕೀಯವೇ ಬೇರೆ, ವೈಯಕ್ತಿಕ ಸಂಬಂಧವೇ ಬೇರೆ. ಜನರ ಸಮಸ್ಯೆಗಳ ಪರಿಹಾರಕ್ಕಾಗಿ ರಾಜ್ಯಾದ್ಯಂತ ಹೋರಾಟ ಮಾಡಲು ಸಿದ್ದ ಎಂದು ಅವರು ತಿಳಿಸಿದರು.

2023ರ ವಿಧಾನಸಭೆ ಚುನಾವಣೆವರೆಗೂ ಜನರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರ ಹೋರಾಟ ಮಾಡಲಾಗುವುದು. ರೈತರು, ಕಾರ್ಮಿಕರಿಗಾಗುತ್ತಿರುವ ಅನ್ಯಾಯದ ವಿರುದ್ದವೂ ಜೆಡಿಎಸ್ ಹೋರಾಟ ನಡೆಸಲಿದೆ. ನಾವು ನಡೆಸುವ ಪ್ರತಿಭಟನೆ, ಹೋರಾಟವನ್ನು ವೈಯಕ್ತಿಕವಾಗಿ ಸರ್ಕಾರ ತೆಗೆದುಕೊಳ್ಳದೆ ಸಮಸ್ಯೆ ಬಗೆಹರಿಸಬೇಕು. ರಾಜ್ಯ ಸರ್ಕಾರ ಸೆಸ್ ಕಡಿಮೆ ಮಾಡಬಹುದು. ಆದರೆ ಕೇಂದ್ರ ಸರ್ಕಾರ ಬೆಲೆಯನ್ನು ಇಳಿಸಬೇಕು ಎಂದು ಒತ್ತಾಯಿಸಿದರು.

ಬೆಂಗಳೂರಿನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಜನರ ನಂಬಿಕೆ, ವಿಶ್ವಾಸ ಗಳಿಸುವ ರೀತಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಎಲ್ಲ 28 ಕ್ಷೇತ್ರಗಳಲ್ಲೂ ಹೋರಾಟ ನಡೆಸಬೇಕು ಎಂದು ಕರೆ ಕೊಟ್ಟರು. ಪೆಟ್ರೋಲ್ ಬೆಲೆ 100 ರೂ.ಗೆ ಏರಿಕೆಯಾಗಬಹುದು ಎಂಬ ಭಾವನೆಯಿದೆ. ಬೆಲೆ ಏರಿಕೆ ವಿರುದ್ಧ ನಡೆಸುತ್ತಿರುವ ಹೋರಾಟ ನಿಲ್ಲಿಸಬಾರದು. ನಿನ್ನೆ ಕೇರಳದ ತಮ್ಮ ಪಕ್ಷದ ಮುಖಂಡರು ಬಂದಿದ್ದರು. ಅಲ್ಲಿ ಎಡಪಂಥೀಯರ ಪರವಾಗಿದ್ದೇವೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಇರುವುದರಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಲ್ಲಿ ಹೋಗಿದ್ದಾರೆ. ಇಲ್ಲದಿದ್ದರೆ ಅವರು ಪಾಲ್ಗೊಳ್ಳುತ್ತಿದ್ದರು. ಮಾರ್ಚ್ ಮೊದಲ ವಾರದ ನಂತರ ತಿಂಗಳಿಗೆ ಒಂದು ಅಥವಾ ಎರಡು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಮಹಿಳಾ ಸಮಾವೇಶವನ್ನು ಮಾಡುವ ಉದ್ದೇಶವಿದೆ. ಫೆಬ್ರವರಿ 27ರಂದು ಮಹಿಳಾ ಹೋರಾಟಗಾರರಿಗೆ ಕಿಟ್ ಕೊಡುವ ಕಾರ್ಯಕ್ರಮವಿದ್ದು, ಅದರಲ್ಲೂ ಪಾಲ್ಗೊಳ್ಳುವುದಾಗಿ ಗೌಡರು ಹೇಳಿದರು.

ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ ಮಾತನಾಡಿ, ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಶುಲ್ಕವನ್ನು ಕೇಂದ್ರ ಸರ್ಕಾರ ಕಡಿಮೆ ಮಾಡಬೇಕು. ರಾಜ್ಯ ಸರ್ಕಾರ ವ್ಯಾಟ್ ಇಳಿಕೆ ಮಾಡಬೇಕೆಂದು ಒತ್ತಾಯಿಸಿದರು. ವಿಧಾನಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಮಾತನಾಡಿ, ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ಜೀವನ ಕಷ್ಟವಾಗಿದೆ.

ಪೆಟ್ರೋಲ್ ಪ್ರತಿ ಲೀಟರ್ ಬೆಲೆ ಶತಕ ಬಾರಿಸುವ ನಿಟ್ಟಿನಲ್ಲಿ ಏರಿಕೆಯಾಗುತ್ತಿದೆ. ಅಗತ್ಯವಸ್ತುಗಳು ಏರಿಕೆಯಾಗುತ್ತಿದ್ದು, ಕೂಡಲೇ ಬೆಲೆ ಏರಿಸುವ ಮೂಲಕ ಜನರ ನೆರವಿಗೆ ಧಾವಿಸಬೇಕು ಎಂದರು. ವಿಧಾನಪರಿಷತ್ ಸದಸ್ಯ ರಮೇಶ್ ಗೌಡ, ಜೆಡಿಎಸ್ ಬೆಂಗಳೂರುನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ಪಕ್ಷದ ಮುಖಂಡರಾದ ಮುನೇಗೌಡ, ನಾರಾಯಣಸ್ವಾಮಿ, ರುತ್‍ಮನೋರಮಾ ಮೊದಲಾದ ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಜೆಡಿಎಸ್ ಕಚೇರಿ ಜೆಪಿಭವನದಿಂದ ಆನಂದರಾವ್ ವೃತ್ತದಲ್ಲಿರುವ ಮಹಾತ್ಮ ಗಾಂ ಪ್ರತಿಮೆವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಯಿತು. ಬೆಲೆ ಏರಿಕೆ ವಿರುದ್ಧ ಫಲಕಗಳನ್ನು ಪ್ರದರ್ಶಿಸಿ, ಸಿಲಿಂಡರ್‍ಗಳನ್ನು ತಲೆ ಮೇಲೆ ಹೊತ್ತು ಅಗತ್ಯ ವಸ್ತು ಹಾಗೂ ತೈಲ ಬೆಲೆ ಏರಿಕೆಯನ್ನು ವಿರೋಸಲಾಯಿತು.  ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಪ್ರತಿಭಟನಾನಿರತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Facebook Comments

Sri Raghav

Admin