ಅನುದಾನ ರಹಿತ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ದೇವೇಗೌಡರ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಆ.26- ಶಿಕ್ಷಕರ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ನಗರದ ಮಹಾತ್ಮ ಗಾಂೀಜಿ ಪ್ರತಿಮೆ ಬಳಿ ಮಾಜಿ ಪ್ರಧಾನಿ ಎಚ್.ಡಿ ದೇವೇ ಗೌಡರು ಧರಣಿ ನಡೆಸಿದರು.

ಶಿಕ್ಷಕರ ಮತ್ತು ಆಡಳಿತ ಮಂಡಳಿ ಪೋರಂ ವತಿಯಿಂದ ಇಂದು ನಗರದ ಮËರ್ಯ ಹೋಟೆಲ್ ವೃತ್ತದ ಬಳಿ ಇರುವ ಮಹಾತ್ಮ ಗಾಂೀಜಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಧರಣಿಯಲ್ಲಿ ಭಾಗವಹಿಸಿದ ದೇವೇಗೌಡರು ಮಾತನಾಡಿ, ಅನುದಾನರಹಿತ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್, ಸೇವಾಭದ್ರತೆ, ಬಾಕಿ ಇರುವ ಆರ್‍ಟಿಇ ಹಣ ಬಿಡುಗಡೆ, ಆರೋಗ್ಯ ವಿಮೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಏಕರೂಪ ಶಿಕ್ಷಣ ಜಾರಿಗೆ ತರಲು ಹೊರಟಿದೆ. ಇದರಿಂದ ಅನೇಕ ಸಮಸ್ಯೆಗಳು ಆಗುತ್ತವೆ. ನಾನು ಸಂಸತ್ ಅವೇಶನದಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇನೆ. ಅಂಕಿ- ಅಂಶದ ಸಮೇತ ಈ ಬಗ್ಗೆ ಧ್ವನಿ ಎತ್ತುತ್ತೇನೆ ಎಂದರು.

ಖಾಸಗಿ ಶಾಲೆಗಳ ಶಿಕ್ಷಕರ ಸಹಾಯಕ್ಕೆ ಸರ್ಕಾರ ಕೂಡಲೇ ಧಾವಿಸಬೇಕು. ಈಗಾಗಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೇನೆ. ಮತ್ತೊಂದು ಪತ್ರ ಬರೆಯುತ್ತೇನೆ. ಇಂತಹ ಸಮಯದಲ್ಲಿ ಸರ್ಕಾರ ಮಾನವೀಯತೆ ಪ್ರದರ್ಶನ ಮಾಡಬೇಕು ಎಂದು ಹೇಳೀದರು.

ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು. ಈ ವಿಚಾರವನ್ನೂ ಸಂಸತ್ ಅವೇಶನಲ್ಲಿ ಚರ್ಚೆ ಮಾಡುವುದಾಗಿ ಗೌಡರು ತಿಳಿಸಿದರು.

ಧರಣಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಪೆÇೀರಂ ಅಧ್ಯಕ್ಷ ಎ.ಪಿ.ರಂಗನಾಥ್ ಸೇರಿದಂತೆ ಶಿಕ್ಷಕ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರು, ವಿಧಾನ ಪರಿಷತ್ ಮಾಜಿ ಸದಸ್ಯರು, ಶಿಕ್ಷಣ ಸಂಘಟನೆಗಳ ಪದಾಕಾರಿಗಳು ಭಾಗಿಯಾಗಿದ್ದರು.

ಶಿಕ್ಷಕರ ಸಮಸ್ಯೆ ಪರಿಹಾರ ಮಾಡದೇ ಹೋದರೆ ಹೋರಾಟ ಮಾಡುತ್ತೇವೆ. ಇದು ಮೊದಲ ಹಂತದ ಹೋರಾಟ. ಸರ್ಕಾರ ಸ್ಪಂದಿಸದೇ ಹೋದರೆ ಮತ್ತೆ ಹೋರಾಟ ತೀವ್ರಗೊಳಿಸುತ್ತೇವೆ ಎಂದು ಧರಣಿ ನಿರತರು ಎಚ್ಚರಿಸಿದರು.

Facebook Comments

Sri Raghav

Admin