ಗ್ರಾಮ ವಾಸ್ತವ್ಯ ಮುಗಿಸಿದ ಸಿಎಂ ಇಂದು ಅಮೆರಿಕ ಪ್ರವಾಸ

ಈ ಸುದ್ದಿಯನ್ನು ಶೇರ್ ಮಾಡಿ

ಬೀದರ್, ಜೂ.28-ಆದಿಚುಂಚನಗಿರಿ ಮಠ ಅಮೆರಿಕದ ನ್ಯೂಜೆರ್ಸಿಯಲ್ಲಿ ದೇವಸ್ಥಾನ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಾವು ವೈಯಕ್ತಿಕ ವೆಚ್ಚದಲ್ಲಿ ತೆರಳುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಸರ್ಕಾರಿ ವೆಚ್ಚದಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳುವುದಿಲ್ಲ ಎಂದ ಅವರು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ನ್ಯೂಜೆರ್ಸಿಯಲ್ಲಿ ದೇವಾಲಯ ನಿರ್ಮಿಸುತ್ತಿದ್ದಾರೆ. ಆ ದೇವಾಲಯದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ತಮ್ಮನ್ನು ಬರಲೇಬೇಕೆಂದು ಒತ್ತಾಯ ಮಾಡಿದ್ದಾರೆ.

ತಮ್ಮ ಬಿಡುವಿಲ್ಲದ ಕಾರ್ಯಕ್ರಮಗಳ ಬಗ್ಗೆ ಸ್ವಾಮೀಜಿಯವರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ಮಾಡಿದ್ದೇನೆ. ಆದರೂ ಅವರು ಬರಲೇಬೇಕೆಂಬ ತೀವ್ರ ಒತ್ತಡ ಹೇರಿರುವ ಹಿನ್ನೆಲೆಯಲ್ಲಿ ನ್ಯೂಜೆರ್ಸಿಗೆ ಹೋಗುತ್ತಿರುವುದಾಗಿ ತಿಳಿಸಿದರು.

ಇಂದು ರಾತ್ರಿ ಮುಖ್ಯಮಂತ್ರಿ ನ್ಯೂಜೆರ್ಸಿಗೆ ತೆರಳಲಿದ್ದು, ಜುಲೈ ಮೊದಲ ವಾರದಲ್ಲಿ ವಾಪಸ್ ಮರಳುವ ಕಾರ್ಯಕ್ರಮವಿದೆ.

Facebook Comments