“ಸೋನಿಯಾ ಗಾಂಧಿ ಮನವಿಯ ಮೇರೆಗೆ ದೇವೇಗೌಡರು ರಾಜ್ಯಸಭೆಗೆ ಸ್ಪರ್ಧೆ”

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಜೂ.8- ನಮ್ಮ ಪಕ್ಷದ ಶಾಸಕರು, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ದೇವೇಗೌಡರು ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನತ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರನ್ನು ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ ಎಂದು ಹೇಳಿದ್ದಾರೆ.

ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಾಳೆ ರಾಜ್ಯಸಭೆ ಚುನಾವಣೆಗೆ ಗೌಡರು ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮತಿಸಿದ ದೇವೇಗೌಡರಿಗೆ ಧನ್ಯವಾದಗಳನ್ನು ಕುಮಾರಸ್ವಾಮಿ ಸಲ್ಲಿಸಿದ್ದಾರೆ.

Facebook Comments